ಗದಗ | ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ – ಗ್ರಾಮ ಸಹಾಯಕ ಸಾವು

Public TV
1 Min Read

ಗದಗ: ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಬಂಧಿಸಿದ್ದು, ಬೈಕ್ ಸವಾರ ಗ್ರಾಮ ಸಹಾಯಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ (Gadag) ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರ ಬಳಿ ನಡೆದಿದೆ.

ಮೊಹಮ್ಮದ್ ರಫಿಕ್ ನದಾಫ್ (26) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೊಹಮ್ಮದ್ ರಫಿಕ್ ಹುಲ್ಲೂರ ಗ್ರಾಮ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳದ ಆರೋಪ – ಮಗುವಿನ ಎದುರೇ ತಾಯಿ ನೇಣಿಗೆ ಶರಣು

ಈ ಅಪಘಾತಕ್ಕೆ ಅಕ್ರಮ ಮರಳು ಮಾಫಿಯಾದವರ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಅಕ್ರಮ ಮರಳು ತಡೆಯಲು ಹೋದ ವೇಳೆ ಈ ಘಟನೆ ನಡೆದಿರಬಹುದು. ಇದನ್ನು ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಗ್ರಾಮ ಸಹಾಯಕರ ಸಂಘದಿಂದ ತಹಶೀಲ್ದಾರ್‌ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧಿಸಿದ ಟ್ರ‍್ಯಾಕ್ಟರನ್ನು ವಶಕ್ಕೆ ಪಡೆದಿದ್ದಾರೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article