ಗಣೇಶೋತ್ಸವ ಕಲ್ಲು ತೂರಾಟ ಪ್ರಕರಣ; ಪೊಲೀಸ್ ಇಲಾಖೆ ಸಂಪೂರ್ಣ ವಿಫಲ: ವಿಜಯೇಂದ್ರ

Public TV
4 Min Read

– ಈ ಸರ್ಕಾರ ಹಿಂದೂಪರ ಅಲ್ಲ ಅಂತ ಘೋಷಿಸಲಿ ಎಂದು ಸವಾಲು

ಬೆಂಗಳೂರು: ಮದ್ದೂರು ಗಲಭೆ ಘಟನೆಗೆ (Maddur Stone Pelting) ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ. ಮದ್ದೂರಿನಲ್ಲಿ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸತ್ಯಾಸತ್ಯತೆ ಪರಿಶೀಲಿಸಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ಇದೆ. ಇವರು ನಿಜಾಮರ ಆಡಳಿತವನ್ನು ನೆನಪು ಮಾಡಿ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಧೋರಣೆ ಸರಿಪಡಿಸಿಕೊಳ್ಳದಿದ್ದರೆ ಖಂಡಿತವಾಗಿ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಇದಕ್ಕೆ ರಾಜ್ಯ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

ಗಣಪತಿ ಮೆರವಣಿಗೆಯಲ್ಲಿ ಕೇಸರಿ ಶಾಲು ಹಾಕಿ ಡ್ಯಾನ್ಸ್ ಮಾಡಿದ ಪಿಎಸ್‌ಐ ಒಬ್ಬರನ್ನು ಅಮಾನತು ಮಾಡುವ ಮಾಹಿತಿ ನನಗೆ ಬಂದಿದೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ? ನಮ್ಮ ರಾಜ್ಯದಲ್ಲಿ ಇವತ್ತು ಏನಾಗುತ್ತಿದೆ? ದಿನನಿತ್ಯ ಯಾವ ರೀತಿ ಪರಿಸ್ಥಿತಿ ಹದಗೆಡುತ್ತಿದೆ? ಕಾನೂನು ಸುವ್ಯವಸ್ಥೆ ಮುರಿದುಬಿದ್ದಿದೆ. ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ಇಂಥ ದುರ್ಬುದ್ಧಿ ಬಂದಿದೆ? ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು ಏನು ಅನ್ಯಾಯ ಮಾಡಿದ್ದಾರೆ ಎಂದು ರಾಜ್ಯದ ಅಸಂಖ್ಯಾತ ಹಿಂದೂ ಕಾರ್ಯಕರ್ತರು ಮುಖ್ಯಮಂತ್ರಿಗಳನ್ನು ಪ್ರಶ್ನಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಸುತ್ತ ಅಯೋಗ್ಯರನ್ನೇ ಇಟ್ಟುಕೊಂಡಂತಿದೆ ಎಂದು ಹೇಳಿದರು. ಇದನ್ನೂ ಓದಿ: ‌ಸೆಕ್ಸ್ ವರ್ಕರ್ ವಸ್ತುವಲ್ಲ‌, ಸೇವೆ‌ ಪಡೆಯುವವನು ಗ್ರಾಹಕನೂ ಅಲ್ಲ: ಕೇರಳ ಹೈಕೋರ್ಟ್

ಹಿಂದೂಗಳ ಮೇಲೆ ಕಲ್ಲೆಸೆತ, ಹಲ್ಲೆ ನಡೆಯುತ್ತಿದೆ. ಗಣಪತಿ ಮಹೋತ್ಸವವನ್ನೂ ಹಿಂದೂಗಳು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವು ಕಳೆದ ಎರಡೂವರೆ ವರ್ಷಗಳಿಂದ ನಿರಂತರವಾಗಿ ನಡೆಯುತ್ತ ಬಂದಿದೆ ಎಂದು ಟೀಕಿಸಿದರು. ಇದನ್ನೂ ಓದಿ: ನೇಪಾಳ ಧಗ ಧಗ – ಉದ್ರಿಕ್ತರಿಂದ ಮನೆಗೆ ಬೆಂಕಿ, ಮಾಜಿ ಪ್ರಧಾನಿ ಪತ್ನಿ ಸಾವು

ತಡೆಯಲು ಇವರು ಯಾರು?
ನಮ್ಮ ರಾಜ್ಯದಲ್ಲಿ ಆರ್‌ಎಸ್‌ಎಸ್, ಹಿಂದೂ ಸಂಘಟನೆಗಳು, ಹಿಂದೂ ಕಾರ್ಯಕರ್ತರನ್ನು ತಡೆಯಲು ಇವರು ಯಾರು? ಚಾಮುಂಡಿ ಬೆಟ್ಟಕ್ಕೆ, ಧರ್ಮಸ್ಥಳಕ್ಕೆ ಅಥವಾ ಗಣಪತಿ ಮೆರವಣಿಗೆಯಲ್ಲಿ ಹೋಗುವುದಾರೆ ಇವರು ಯಾರು ತಡೆಯುವುದಕ್ಕೆ ಎಂದು ಕೇಳಿದರು. ಪಾಕಿಸ್ತಾನ ಜಿಂದಾಬಾದ್ ಎಂದವರನ್ನು ತಾಕತ್ತಿದ್ದರೆ ಒದ್ದು ಒಳಗಡೆ ಹಾಕಲಿ ಎಂದು ಸವಾಲೆಸೆದರು. ಅದನ್ನು ಮಾಡಲು ಈ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಇವರು ಹಾಗಿದ್ದರೆ ನಮ್ಮನ್ನು ಪ್ರಶ್ನಿಸುತ್ತಾರಾ ಎಂದರು. ಇದನ್ನೂ ಓದಿ: ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದವ್ರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಶಿವಾನಂದ ಪಾಟೀಲ್

ಮಧು ಬಂಗಾರಪ್ಪ ಇರುವ ಇಲಾಖೆಯನ್ನು ನೆಟ್ಟಗೆ ನೋಡಿಕೊಳ್ಳಲಿ. ಇರುವ ಸರ್ಕಾರಿ ಶಾಲೆಗಳು ಮುಚ್ಚಿ ಹೋಗುತ್ತಿದೆ. ಅವರೇನು ಇದರ ಬಗ್ಗೆ ಮಾತನಾಡುವುದು ಎಂದು ಪತ್ರಕರ್ತರ ಪ್ರಶ್ನೆಗೆ ಮರು ಪ್ರಶ್ನೆ ಹಾಕಿದರು. ಇದನ್ನೂ ಓದಿ: ಕೋಲಾರ ನಗರದ 19 ಉದ್ಯಾನವನಗಳ ಅಭಿವೃದ್ಧಿಗೆ ಮುಂದಾದ ನಗರಸಭೆ

ಹಿಂದೂಗಳ ಪರವಾಗಿ ಇಲ್ಲವೆಂದು ಘೋಷಿಸಲಿ:
ಬಿಜೆಪಿ ಹಿಂದುತ್ವದ ಪರವಾಗಿ ಇದೆ. ಅದನ್ನು ಪ್ರಶ್ನೆ ಮಾಡಲು ಇರ‍್ಯಾರು? ಸರ್ಕಾರ ನಡೆಸುತ್ತಿದ್ದಾರೆ, ಕಾನೂನು- ಸುವ್ಯವಸ್ಥೆ ಕಾಪಾಡಿ ಹಿಂದೂಗಳ ರಕ್ಷಣೆ ಮಾಡುವುದು ಇವರ ಕರ್ತವ್ಯವಲ್ಲವೇ? ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಹಿಂದೂಗಳ ಪರವಾಗಿ ಇಲ್ಲವೆಂದು ಘೋಷಿಸಲಿ. ಹಿಂದೂಗಳು ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕೆಂದು ಪ್ರಕಟಿಸಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕರ್ತವ್ಯನಿರತ ಯೋಧನಿಗೆ ವಿದ್ಯುತ್ ಶಾಕ್ – ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಸಾವು

ನಾಳೆ ಮದ್ದೂರಿಗೆ ಭೇಟಿ:
ನಾಳೆ (ಸೆ.10) ಬೆಳಿಗ್ಗೆ 10, 10.30ಕ್ಕೆ ನಾನು, ನಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಪಕ್ಷದ ಇತರ ಮುಖಂಡರು ಮದ್ದೂರಿಗೆ ಭೇಟಿ ಕೊಡಲಿದ್ದೇವೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ನೇಪಾಳದಲ್ಲಿ ಅಲ್ಲೋಲ ಕಲ್ಲೋಲ – ಹಣಕಾಸು ಸಚಿವನನ್ನ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಉದ್ರಿಕ್ತರು

ಪೊಲೀಸ್ ಠಾಣೆಗೆ ಕಲ್ಲು ಬಿಸಾಡಿದ, ಪೊಲೀಸ್ ಠಾಣೆಗೆ ನುಗ್ಗಿ ಬೆಂಕಿ ಹಚ್ಚಿದ ದೇಶದ್ರೋಹಿಗಳ ಕೇಸು ರದ್ದು ಮಾಡಿದ್ದಾರೆ. ಮೊನ್ನೆ ದಿನ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ; ಸಾವಿರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು ಪಾಲ್ಗೊಳ್ಳುತ್ತಾರೆ ಎಂಬ ಮಾಹಿತಿ ಪೊಲೀಸರಿಗೆ ಇರಲಿಲ್ಲವೇ ಎಂದು ಪ್ರಶ್ನೆ ಮಾಡಿದರು. ಪೊಲೀಸ್ ವರಿಷ್ಠಾಧಿಕಾರಿಗಳು ಯಾಕೆ ಅಲ್ಲಿ ಇರಲಿಲ್ಲ? ಯಾಕೆ ಕೆಲವರು ಮಸೀದಿ ಒಳಗೆ ತೆರಳಲು ಪೊಲೀಸರು ಅವಕಾಶ ಕೊಟ್ಟರು? ಯಾಕೆ ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ಇದನ್ನೂ ಓದಿ: ಕರ್ನಾಟಕದಲ್ಲಿ ಮುಲ್ಲಾಗಳ ಸರ್ಕಾರ ಅನ್ನೋದು ಸಾಬೀತಾಗಿದೆ: ಅಶೋಕ್

ಮಾಡಿರುವುದೇ ಮಣ್ಣು ತಿನ್ನುವ ಕೆಲಸ. ಬಿಜೆಪಿ ಮೇಲೆ ದೂರುತ್ತೀರಾ ಹಾಗಾದರೆ? ಇವರ ವೈಫಲ್ಯವನ್ನು ನಮ್ಮ ಮೇಲೆ ಹಾಕುತ್ತೀರಾ ನೀವು? ಚಾಮುಂಡಿ ಬೆಟ್ಟಕ್ಕೆ ತೆರಳುವ ಹಿಂದೂ ಕಾರ್ಯಕರ್ತರನ್ನು ಇವತ್ತು ತಡೆದಿದ್ದಾರೆ. ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳನ್ನು ಕಂಡರೆ ಆಗುವುದಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ

ಮುಖ್ಯಮಂತ್ರಿಗಳ ಸುತ್ತ ಪಟ್ಟಭದ್ರ ದುಷ್ಟ ಶಕ್ತಿಗಳು ಸುತ್ತುವರಿದಿದ್ದಾರೆ. ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ. ಅವರ ಸುತ್ತಲಿನ ಸಚಿವರ ಹೇಳಿಕೆ ಗಮನಿಸಿದರೆ ಹಿಂದೂ ಕಾರ್ಯಕರ್ತರು ಅನಿವಾರ್ಯವಾಗಿ ಬೀದಿಗೆ ಇಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಸರ್ಕಾರ ಬುಡಮೇಲು ಮಾಡಲು ಅಮಿತ್ ಶಾ ಸಲಹೆ – ಬಿಜೆಪಿ ನಾಯಕರ ದೆಹಲಿ ಭೇಟಿಗೆ ಹರಿಪ್ರಸಾದ್ ಲೇವಡಿ

Share This Article