ಮೈಸೂರು: ಯುವತಿಯನ್ನು ಗುರಾಯಿಸಿದ್ದಕ್ಕೆ ಮಚ್ಚು ಹಾಗೂ ವಿಕೆಟ್‍ನಿಂದ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಜಿಲ್ಲೆಯ ಉದಯಗಿರಿ ಆರ್.ಕೆ. ಪ್ಯಾಲೇಸ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ನಡು ರಸ್ತೆಯಲ್ಲೇ ಲಾಂಗ್ ಹಿಡಿದು ಗುಂಪು ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಯುವತಿ ಜೊತೆ ಹೋಗುವ ವೇಳೆ ಗುರಾಯಿಸಿದ್ದ ಎನ್ನುವ ಒಂದೇ ಕಾರಣಕ್ಕೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ.
ಯುವಕರ ಗುಂಪು ಯುವಕನ ಮೇಲೆ ಹಲ್ಲೆ ಮಾಡಿದ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಲ್ಲೆಗೆ ಒಳಗಾದ ಅಪರಿಚಿತ ಯುವಕನಿಗೆ ಗಂಭೀರ ಗಾಯವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews