ತುಮಕೂರಲ್ಲಿ ಬಾಲಕಿ ಮೇಲೆ ಗ್ಯಾಂಗ್‍ರೇಪ್- ಮೂವರ ಬಂಧನ

Public TV
1 Min Read

ತುಮಕೂರು: ಸಿದ್ದಗಂಗಾ ಮಠದ (Siddaganga Mutt) ಜಾತ್ರೆಗೆ ಬಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ ಹಾಗೂ ಪ್ರತಾಪ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹೊಡಿಯ ಪ್ರಾರ್ಥನಾ ಮಂದಿರದ ಬಳಿ ಬಟ್ಟೆ ಬದಲಾಯಿಸಿ ಟೋಪಿ ಬಿಟ್ಟು ಹೋದ ಬಾಂಬರ್‌

ಘಟನೆ ವಿವರ: ಸಿದ್ದಗಂಗಾ ಮಠ ಜಾತ್ರೆಗೆ ಬಂದಿದ್ದ ಬಾಲಕಿ ಬೆಟ್ಟದ ಬಳಿ ಕುಳಿತಿದ್ದಳು. ಈ ವೇಳೆ ಬಾಲಕಿ ಬಳಿ ಬಂದ ಕಾಮುಕರು ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಬಂಡೆ ಪಾಳ್ಯದ ಮನೆಯೊಂದರಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಇದಕ್ಕೂ ಮುನ್ನ ಮೊಬೈಲ್‍ನಲ್ಲಿ ಬಾಯ್ ವೀಡಿಯೋವೊಂದನ್ನು ತೋರಿಸಿ ಬಿಡುಗಡೆಗೊಳಿಸುವುದಾಗಿ ಬೆದರಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇತ್ತ ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಎಚ್ಚೆತ್ತು, ಆರೋಪಿಗಳ ವಿರುದ್ಧ ಪೋಕಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಬಳಿಕ ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರಿಂದ ತನಿಖೆ ಮುಂದುವರಿದಿದೆ.

Share This Article