500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

Public TV
1 Min Read

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗಾಗಿ (Delhi Assembly Election) ಕಾಂಗ್ರೆಸ್‌ (Congress) ಪಕ್ಷ ಮತ್ತೆರೆಡು ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ.ಇದನ್ನೂ ಓದಿ: ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ

ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಫೆ.5 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೆಹಲಿ ನಿವಾಸಿಗಳಿಗೆ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು, ಈ ಮೂಲಕ 500 ರೂ. ಎಲ್‌ಪಿಜಿ ಸಿಲಿಂಡರ್, ಉಚಿತ ಪಡಿತರ ಕಿಟ್ ಮತ್ತು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಜೊತೆಗೆ ಕಾಂಗ್ರೆಸ್ ತನ್ನ ಐದು ಭರವಸೆಗಳನ್ನು ಪೂರೈಸುತ್ತದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ `ಜೀವನ್ ರಕ್ಷಾ’ ಹೆಸರಿನಲ್ಲಿ 25 ಲಕ್ಷ ರೂ. ವಿಮೆ, `ಪ್ಯಾರಿ ದೀದಿ’ ಯೋಜನೆಯಡಿ 2,500 ರೂ. ನೀಡುವ ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದರು. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ `ಪ್ಯಾರಿ ದೀದಿ’ ಯೋಜನೆಯನ್ನು ಘೋಷಿಸಿದ್ದರು. ಅಲ್ಲದೇ ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು.ಇದನ್ನೂ ಓದಿ: ಸತತ ಸೋಲಿನ ಬಳಿಕ ಬಿಸಿ ಮುಟ್ಟಿಸಿದ ಬಿಸಿಸಿಐ – ಟೀಂ ಇಂಡಿಯಾ ಆಟಗಾರರಿಗೆ ಮತ್ತೊಂದು ಟಫ್‌ ರೂಲ್ಸ್‌

Share This Article