ಜಿಬಿಎ 5 ಪಾಲಿಕೆಗಳ ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ; 369 ವಾರ್ಡ್‌ಗಳಿಗೆ ಸೀಮಿತ

Public TV
1 Min Read

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ ಮೀಸಲಾತಿ ಪಟ್ಟಿಯನ್ನು ಬೆಂಗಳೂರು ನಗರಾಭಿವೃದ್ಧಿ ಇಲಾಖೆ (BDA) ಇಂದು ಪ್ರಕಟಿಸಿದೆ.

ಅಂತಿಮ ವಾರ್ಡ್‌ಗಳ ಪಟ್ಟಿ ಪ್ರಕಟಿಸಿದ್ದು, ಈ ಹಿಂದೆ 368 ಇದ್ದ ವಾರ್ಡ್‌ಗಳ ಸಂಖ್ಯೆಯನ್ನ 369ಕ್ಕೆ ಹೆಚ್ಚಿಸಲಾಗಿದೆ. ಬೆಂಗಳೂರು ಪಶ್ಚಿಮ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಹೆಚ್ಚುವರಿ ವಾರ್ಡ್‌ ಸೇರ್ಪಡೆ ಮಾಡಿದ್ದು, 369 ವಾರ್ಡ್‌ಗಳಿಗೆ ಸೀಮಿತಗೊಳಿಸಲಾಗಿದೆ.

ಯಾವ್ಯಾವ ಪಾಲಿಕೆಯಲ್ಲಿ ಎಷ್ಟೆಷ್ಟು ವಾರ್ಡ್?
1. ಬೆಂಗಳೂರು ದಕ್ಷಿಣ ನಗರ ಪಾಲಿಕೆ – 72 ವಾರ್ಡ್
2. ಬೆಂಗಳೂರು ಉತ್ತರ ನಗರ ಪಾಲಿಕೆ – 72 ವಾರ್ಡ್
3. ಬೆಂಗಳೂರು ಪಶ್ಚಿಮ ನಗರ ಪಾಲಿಕೆ – 112 ವಾರ್ಡ್
4. ಬೆಂಗಳೂರು ಪೂರ್ವ ನಗರ ಪಾಲಿಕೆ – 50 ವಾರ್ಡ್
5. ಬೆಂಗಳೂರು ಕೇಂದ್ರ ನಗರ ಪಾಲಿಕೆ – 63 ವಾರ್ಡ್
ಒಟ್ಟು ವಾರ್ಡ್‌ಗಳ ಸಂಖ್ಯೆ – 369 ವಾರ್ಡ್‌ಗಳು

ವಾರ್ಡ್‌ ಮೀಸಲಾತಿ ಪಟ್ಟಿ ಪ್ರಕಟಿಸಲು ಅಕ್ಟೋಬರ್‌ 15ರ ಒಳಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಗಡಿ ರೇಖೆ, ರಸ್ತೆಗಳನ್ನ ವಾರ್ಡ್‌ಗಳ ಗಡಿಗಳಾಗಿ ಪರಿಷ್ಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗಿತ್ತು. ಈಗ ಅಧಿಕೃತವಾಗಿ 369 ವಾರ್ಡ್ ಗಳಾಗಿ ವಿಂಗಡಿಸಿ ಪಟ್ಟಿ ಪ್ರಕಟಿಸಿದೆ.

Share This Article