ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ, ಜೆಡಿಎಸ್ ಕಾರ್ಯಕರ್ತರಿಗೆ ವೀರ ಸಂದೇಶ ಕೊಟ್ಟ ಹೆಚ್‍ಡಿಕೆ

Public TV
2 Min Read

ಬೆಂಗಳೂರು: ನನ್ನನ್ನೂ ಸೇರಿ ಪಕ್ಷದಲ್ಲಿರುವ ಪ್ರತಿಯೊಬ್ಬರೂ ಪಕ್ಷದ ಕಟ್ಟಾಳುಗಳೇ ಎನ್ನವುದನ್ನು ಯಾರೂ ಮರೆಯುವಂತಿಲ್ಲ. ಪಕ್ಷದ ಉಳಿವು, ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ. ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ. ಈ ವಿವೇಕವಾಣಿಯೇ ನಮ್ಮ ಪಾಲಿನ ಮೂಲಮಂತ್ರ ಎಂದು ಕಾರ್ಯಕರ್ತರನ್ನು ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ಹುರಿದುಂಬಿಸಿದ್ದಾರೆ.

ಮುಂಬರುವ ಲೋಕಸಭಾ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಸೆ.10 ರಂದು ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ಬೃಹತ್ ಜೆಡಿಎಸ್ (JDS) ಸಮಾವೇಶ ನಡೆಯಲಿದೆ. ಕಾರ್ಯಕರ್ತರು ತಪ್ಪದೇ ಸಭೆಗೆ ಬರಬೇಕು. ಪಕ್ಷ ಸಂಘಟನೆ ವಿಚಾರವಾಗಿ ಮುಕ್ತವಾಗಿ ಮಾತನಾಡೋಣ. ಮುಂದಿನ ಹೆಜ್ಜೆಗಳನ್ನು ದೃಢವಾಗಿ ಇಡೋಣ ಎಂದು ಅವರು ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: ಶಿವಾನಂದ ಪಾಟೀಲ್‍ಗೆ ಒಂದು ಕೋಟಿ ರೂ. ಕೊಟ್ಟರೆ ಆತ್ಮಹತ್ಯೆ ಮಾಡಿಕೊಳ್ತಾರಾ?: ಬಿ.ಸಿ ಪಾಟೀಲ್

ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‍ನಲ್ಲಿ ಭಾನುವಾರ ಬೆಳಗ್ಗೆ 10:30ಕ್ಕೆ ಸಭೆ ಆರಂಭವಾಗಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ನಿಮ್ಮೆಲ್ಲರ ಪ್ರೀತಿ, ಹಾರೈಕೆ, ದೈವದ ಕರುಣೆ, ತಂದೆ ತಾಯಿಯವರ ಆಶೀರ್ವಾದದಿಂದ ನನ್ನ ಆರೋಗ್ಯ ಅತ್ಯುತ್ತಮವಾಗಿ ಸುಧಾರಿಸಿದೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ನಾವೆಲ್ಲರೂ ಪಣತೊಟ್ಟು ಹೊರಡೋಣ. ಪಕ್ಷವನ್ನು ಚೈತನ್ಯಶೀಲವಾಗಿ ಮರಳಿ ಕಟ್ಟೋಣ ಎಂದು ತಿಳಿಸಿದ್ದಾರೆ.

ಕರ್ನಾಟಕ ಈಗ ಸಂಕಷ್ಟದಲ್ಲಿದೆ. ತೀವ್ರ ಬರ-ನೆರೆ, ಅನಧಿಕೃತ ಲೋಡ್ ಶೆಡ್ಡಿಂಗ್, ಕಾವೇರಿ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ಅನ್ನ ಕೊಡುವ ರೈತರನ್ನು, ತೆರಿಗೆ ಕಟ್ಟುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ. ಈ ದುರಿತ ದಿನಗಳಲ್ಲಿ ನಾವು ಜನರ ಜೊತೆ ಬದ್ಧತೆಯಿಂದ ನಿಲ್ಲಬೇಕು. ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆಯಾಗಿದೆ. ಇದು ಈ ಹೊತ್ತಿನ ನೈತಿಕ ಜವಾಬ್ದಾರಿ ಎಂದು ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದ್ದಾರೆ.

ಚುನಾವಣೆಯಲ್ಲಿ ಸೋತಿದ್ದೇವೆ ಆದರೆ ಸೋಲೇ ಕೊನೆಯಲ್ಲ. ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸ್ಥೈರ್ಯ ಹಾಗೂ ಅರ್ಪಣಾ ಭಾವದಿಂದ ಹೆಜ್ಜೆ ಹಾಕುವ ಅಗತ್ಯವಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿದ್ದ ವಕೀಲನ ಮೇಲೆ ಮಾಜಿ ಪತ್ನಿಯಿಂದ ಗಂಭೀರ ಆರೋಪ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್