ರೈಲ್ವೆ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು

By
1 Min Read

ಶಿವಮೊಗ್ಗ: ರೈಲ್ವೆ (Indian Railway) ಕಾಮಗಾರಿಗಾಗಿ ರಸ್ತೆ ಮಧ್ಯದಲ್ಲಿ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕೋಟೆಗಂಗೂರಿನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಮೃತ ಬಾಲಕಿ 5 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಶಾಲೆಯಿಂದ ಮಂಗಳವಾರ ಸಂಜೆ ಮನೆಗೆ ಬಂದಿದ್ದಳು. ಈ ವೇಳೆ ಪೋಷಕರು ಮನೆಗೆ ಬೀಗ ಹಾಕಿಕೊಂಡು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಹೊಲಕ್ಕೆ ಹೋಗಿ ಬೀಗ ಪಡೆದುಕೊಂಡು ವಾಪಾಸ್ ಬರುವಾಗ ಬಾಲಕಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕಾಗಿ ತೆಗೆದಿದ್ದ ಗುಂಡಿಗೆ ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ; ವೈರಲ್‌ ಆಯ್ತು ಸರ್ಕಾರಿ ಅಧಿಕಾರಿಯ ಟೇಬಲ್‌ ಬೋರ್ಡ್‌

ಮಳೆಯಿಂದ ಗುಂಡಿಯಲ್ಲಿ ನೀರು ನಿಂತಿದ್ದರಿಂದ ಬಾಲಕಿಗೆ ಮೇಲೆ ಬರಲು ಸಾಧ್ಯವಾಗಿಲ್ಲ. ಇದರಿಂದ ಆಕೆ ಅಲ್ಲಿಯೇ ಮೃತಪಟ್ಟಿದ್ದಾಳೆ. ಬಳಿಕ ಕೆಲಸ ಮುಗಿಸಿಕೊಂಡು ಬಂದ ಬಾಲಕಿಯ ತಂದೆ-ತಾಯಿ ಮಗಳಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ಚೈತ್ರಾ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ರಸ್ತೆ ನಡುವೆ ಗುಂಡಿ ತೆಗೆದು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಕಾರಣನಾದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೃತ ಚೈತ್ರಾ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಸಂಬಂಧ ಶಿವಮೊಗ್ಗ (Shivamogga) ಗ್ರಾಮಾಂತರ ಪೊಲೀಸ್‌ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪೋರ್ಚುಗಲ್‌ ಪ್ರಧಾನಿ ಸ್ಥಾನಕ್ಕೆ ಆಂಟೋನಿಯೊ ಕೋಸ್ಟಾ ರಾಜೀನಾಮೆ

Share This Article