ಆರ್‌ಸಿಬಿ ಅಭಿಮಾನಿಗೆ ಪ್ರಪೋಸ್ ಮಾಡಿ ಮನಗೆದ್ದ ಹುಡುಗಿ – ನೆಟ್ಟಿಗರು ಫುಲ್ ಆಕ್ಟಿವ್

Public TV
1 Min Read

ಪುಣೆ: ಆರ್‌ಸಿಬಿ ಮತ್ತು ಚೆನ್ನೈ ನಡುವೆ ಜಿದ್ದಾಜಿದ್ದಿನ ಕಾದಾಟ ಮೈದಾನದಲ್ಲಿ ನಡೆಯುತ್ತಿದ್ದರೆ, ಇತ್ತ ಗ್ಯಾಲರಿಯಲ್ಲಿ ಹುಡುಗಿಯೊಬ್ಬಳು ಆರ್‌ಸಿಬಿ ಅಭಿಮಾನಿ ಹುಡುಗನೊಬ್ಬನಿಗೆ ಪ್ರಪೋಸ್ ಮಾಡಿ ಎಲ್ಲರ ಮನಗೆದ್ದಿದ್ದಾಳೆ.

ಹೌದು ಈ ಬಾರಿಯ ಐಪಿಎಲ್‍ನಲ್ಲಿ ರೋಚಕ ಕಾದಾಟ ಒಂದು ಕಡೆಯಾದರೆ, ಇನ್ನೊಂದೆಡೆ ಸೀಮಿತ ಪ್ರೇಕ್ಷಕರು ಮೈದಾನಕ್ಕೆ ಆಗಮಿಸಿ ಕೊರೊನಾ ಬಳಿಕ ಕ್ರಿಕೆಟ್ ಹಬ್ಬವನ್ನು ಆಚರಿಸುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಆಟಗಾರರು ಭರ್ಜರಿ ಪ್ರದರ್ಶನದ ಮೂಲಕ ಅಭಿಮಾನಿಗಳನ್ನು ಹುಚ್ಚೆದ್ದು, ಕುಣಿಯುವಂತೆ ಮಾಡುತ್ತಿದ್ದಾರೆ. ಇತ್ತ ಅಭಿಮಾನಿಗಳು ಆಟಗಾರರಿಗೆ ವಿಭಿನ್ನ ರೀತಿಯಲ್ಲಿ ಚಿಯರ್ ಅಪ್ ಮಾಡುತ್ತಿದ್ದಾರೆ. ಅದೇ ರೀತಿ ನಿನ್ನೆ ಪುಣೆಯಲ್ಲಿ ನಡೆದ ಆರ್‌ಸಿಬಿ ಮತ್ತು ಚೆನ್ನೈ ನಡುವಿನ ಪಂದ್ಯದ ವೇಳೆ ಜೋಡಿ ಹಕ್ಕಿಗಳು ಪ್ರೇಮ ನಿವೇದನೆ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಆರ್‌ಸಿಬಿ ಆರ್ಭಟಕ್ಕೆ ಸೈಲೆಂಟಾದ ಕಿಂಗ್ಸ್ – ಚೆನ್ನೈ ವಿರುದ್ಧ 13 ರನ್‍ಗಳ ಜಯ

ಆರ್‌ಸಿಬಿ ನೀಡಿದ ಪೈಪೋಟಿಯ ಮೊತ್ತವನ್ನು ಚೆನ್ನೈ ಚೇಸ್ ಮಾಡುತ್ತಿದ್ದ ವೇಳೆ ಗ್ಯಾಲರಿಯಲ್ಲಿದ್ದ ಹುಡುಗಿಯೊಬ್ಬಳು ಮಂಡಿಯೂರಿ ರಿಂಗ್ ತೋರಿಸಿ ಹುಡುಗನಿಗೆ ಪ್ರಪೋಸ್ ಮಾಡಿದ್ದಾಳೆ. ಈ ದೃಶ್ಯವನ್ನು ಕ್ಯಾಮೆರಾಮ್ಯಾನ್ ಸೆರೆ ಹಿಡಿದ್ದಾನೆ. ಈ ದೃಶ್ಯ ಸೆರೆಯಾಗುತ್ತಿದ್ದಂತೆ ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು ಜಯಘೋಷ ಮೊಳಗಿಸಿದ್ದಾರೆ. ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ಜೋಡಿ ವೈರಲ್ ಆಗುತ್ತಿದ್ದು, ಜೋಡಿ ಹಕ್ಕಿಗಳ ಫೋಟೋ ಹಂಚಿಕೊಂಡು ನೆಟ್ಟಿಗರು ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: ವೃದ್ಧಿಮಾನ್ ಸಹಾಗೆ ಬೆದರಿಕೆ ಪ್ರಕರಣ – ಪತ್ರಕರ್ತ ಬೋರಿಯಾ ಮಜುಂದಾರ್‌ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ

ಈ ದೃಶ್ಯದ ಬಗ್ಗೆ ಟೀಂ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು, ಆರ್‌ಸಿಬಿ ಅಭಿಮಾನಿಗೆ ಸ್ಮಾರ್ಟ್ ಹುಡುಗಿಯ ಪ್ರೇಮ ನಿವೇದನೆ. ಆತ ಆರ್‌ಸಿಬಿ ತಂಡದ ನಿಷ್ಠಾವಂತ ಅಭಿಮಾನಿಯಾಗಿದ್ದರೆ, ಈಕೆಗೂ ನಿಷ್ಠಾವಂತ ಜೋಡಿಯಾಗಿರುತ್ತಾನೆ. ಶುಭವಾಗಲಿ ಈ ಜೋಡಿಗೆ ಎಂದು ಹಾರೈಸಿದ್ದಾರೆ.

2021ರ ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ದೀಪಕ್ ಚಹರ್ ಗೆಳತಿ ಜಯಾ ಭಾರದ್ವಾಜ್ ಅವರಿಗೆ ಸ್ಟೇಡಿಯಂನಲ್ಲೇ ಪ್ರೇಮ ನಿವೇದನೆ ಮಾಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *