ರಾಮನಗರ: ಗಾಂಜಾ ಮತ್ತಿನಲ್ಲಿ 14 ವರ್ಷದ ಬಾಲಕಿಯ ಮೇಲೆ ಆತ್ಯಚಾರವೆಸಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ರಾಯಚೂರು (Raichur) ಮೂಲದವನು ಎಂದು ತಿಳಿದು ಬಂದಿದೆ. ಬೆಂಗಳೂರು ದಕ್ಷಿಣದ (Bengaluru South) ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಈ ಪ್ರಕರಣ ನಡೆದಿತ್ತು. ಬಾಲಕಿಯ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ಮನೆಗೆ ಬಂದು, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಬಳಿಕ ಸಿಲಿಂಡರ್ನಿಂದ ಮುಖಕ್ಕೆ ಹೊಡೆದು ಕೊಲೆ ಮಾಡಿ, ಸಿಲಿಂಡರ್‌ನ್ನು ಹೊತ್ತೊಯ್ದು ಪಕ್ಕದ ಗ್ರಾಮದಲ್ಲಿ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನು ಕೊಂದು ಅಪಘಾತದಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಅರೆಸ್ಟ್
ಕೊಪ್ಪಳದಿಂದ (Koppal) ಹೊಟ್ಟೆಪಾಡಿಗಾಗಿ ಕೆಲಸಕ್ಕಾಗಿ ಬಾಲಕಿಯ ಕುಟುಂಬ ತಾವರೆಕೆರೆಗೆ ಬಂದು ನೆಲೆಸಿತ್ತು. ಬಾಲಕಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಬುಧವಾರ ಶಾಲೆಗೆ ಹೋಗದೇ ಮನೆಯಲ್ಲೇ ಇದ್ದಳು. ಬಾಲಕಿಯ ತಂದೆ, ತಾಯಿ, ಸಹೋದರ ಕೆಲಸಕ್ಕೆ ಹೋಗಿದ್ದ ವೇಳೆ ಆರೋಪಿ ಕೃತ್ಯ ಎಸಗಿ ಪರಾರಿಯಾಗಿದ್ದ.
ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಕಲಿ ಚಿನ್ನ ಕೊಟ್ಟು 35 ಲಕ್ಷ ವಂಚನೆ – ಇಬ್ಬರು ಅರೆಸ್ಟ್