ಬೆಂಗಳೂರು: ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿಕೊಂಡು ಪಕ್ಕದ ಮನೆಯವನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಮಾದನಾಯಕನಹಳ್ಳಿ (Madanayakanahalli) ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.
ದೀಪು (26) ಬಂಧಿತ ಆರೋಪಿ. ದೀಪು ಬಾಲಕಿಯ ಮನೆಯ ಪಕ್ಕದಲ್ಲೇ ವಾಸಗಿದ್ದು, ರಾತ್ರಿ ವೇಳೆ ಬೆಂಗಳೂರಿನಲ್ಲಿ ಆಟೋ ಓಡಿಸಿ ಬೆಳಿಗ್ಗೆ ಮನೆಯಲ್ಲೆ ಇರುತ್ತಿದ್ದ. ಬಾಲಕಿ ಪಕ್ಕದ ಮನೆಯವಳಾಗಿದ್ದರಿಂದ ಪರಿಚಯ ಮಾಡಿಕೊಂಡಿದ್ದ ಆರೋಪಿ 4 ತಿಂಗಳ ಹಿಂದೆ ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿಕೊಂಡು ಕೃತ್ಯವೆಸಗಿದ್ದಾನೆ. ಅಲ್ಲದೇ 3-4 ಬಾರಿ ಆತನ ಮನೆಗೆ ಕರೆಸಿಕೊಂಡು ಬಾಲಕಿಯ ವಿರೋಧದ ನಡುವೆಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನೂ ಓದಿ: ರೌಡಿಶೀಟರ್ ಶಿವಪ್ರಕಾಶ್ ಕೊಲೆ ಕೇಸ್ – ಮಾಜಿ ಸಚಿವ ಬೈರತಿ ಬಸವರಾಜ್ A5 ಆರೋಪಿ
ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಆಕೆಯ ತಾಯಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಾಲಕಿಯ ತಾಯಿ, ಆರೋಪಿ ದೀಪು ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಮಾದನಾಯಕನಹಳ್ಳಿ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಕಾರು ಡಿಕ್ಕಿಯಾಗಿ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಸಾವು – NRI ಅರೆಸ್ಟ್, ಕಾರು ಸೀಜ್