ಅಂಬರೀಶ್‌ಗೆ ಕರ್ನಾಟಕ ರತ್ನ ನೀಡಿ- ಅಭಿಮಾನಿಗಳಿಂದ ಮನವಿ

Public TV
1 Min Read

ಲಿಯುಗದ ಕರ್ಣ ರೆಬೆಲ್ ಸ್ಟಾರ್ ಅಂಬರೀಶ್ (Ambareesh) ಅವರಿಗೆ ಕರ್ನಾಟಕ ರತ್ನ (Karnataka Rathna) ನೀಡಬೇಕು ಅಂತಾ ಒತ್ತಾಯಿಸಿ ಅಖಿಲ ಕರ್ನಾಟಕ ಡಾ.ಅಂಬರೀಶ್ ಅಭಿಮಾನಿ ಸಂಘ ಫಿಲ್ಮ್ ಚೇಂಬರ್‌ಗೆ (Film Chamber) ಮನವಿ ಮಾಡಿದೆ.

ರಾಜ್ಯಾಧ್ಯಕ್ಷರಾದ ಶ್ರೀನಿವಾಸ್, ಉಪಾಧ್ಯಕ್ಷರು, ಕಲಾವಿದೆ ಶಶಿಕಲಾ, ನಿರ್ಮಾಪಕ ರಾಮಮೂರ್ತಿ, ಧರ್ಮರಾಯ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ನಂಜೇಗೌಡ , ಬೆಂಗಳೂರು ಜಿಲ್ಲಾ ಅಂಬರೀಶ್ ಸಂಘದ ಅಧ್ಯಕ್ಷ ಚಂದ್ರಶೇಖರ್ ಸೇರಿ ಹಲವರು ಭಾಗಿಯಾಗಿದ್ದರು.  ಇದನ್ನೂ ಓದಿಕಾಂತಾರ ಚಾಪ್ಟರ್‌-1 ಟ್ರೈಲರ್ ರಿಲೀಸ್ – ದೃಶ್ಯ ವೈಭವಕ್ಕೆ ಮನಸೋತ ಫ್ಯಾನ್ಸ್

 

ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಎಂ.ನರಸಿಂಹಲು, ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮನವಿ ಸ್ವೀಕರಿಸಿ ಈ ಬಗ್ಗೆ ನಾವು ಸಿಎಂ ಗಮನಕ್ಕೆ ತರುತ್ತೇವೆ. ಡಾ.ವಿಷ್ಣುವರ್ಧನ್ ಹಾಗೂ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ನೀಡುವ ದಿನವೇ ಅಂಬರೀಶ್ ಅವರಿಗೂ ನೀಡುವಂತೆ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದಿದ್ದಾರೆ. ಇದನ್ನೂ ಓದಿ:  ನಿತಿನ್ ಶಿವಾಂಶ್ ಜೊತೆ ಪ್ರೀತಿ ಗುಟ್ಟು ರಟ್ಟು ಮಾಡಿದ ಖ್ಯಾತ ಗಾಯಕಿ ಸುಹಾನಾ ಸಯ್ಯದ್

ಚಿತ್ರರಂಗ ಹಾಗೂ ರಾಜಕೀಯ ರಂಗದಲ್ಲಿ ಅಂಬರೀಶ್ ಅವರು ಸಲ್ಲಿಸಿದ ಸೇವೆಯನ್ನ ಗುರುತಿಸಿ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ ಕರ್ನಾಟಕ ರತ್ನ ಘೋಷಣೆ ಮಾಡಬೇಕು. ವಿಷ್ಣುವರ್ಧನ್ ಅವರ ಕುಚಿಕು ಗೆಳೆಯರಾಗಿದ್ದ ಅಂಬರೀಶ್ ಅವರಿಗೂ ಗೆಳೆಯ ವಿಷ್ಣುವರ್ಧನ್ ಅವರಿಗೆ ಗೌರವ ಪ್ರದಾನದ ದಿನವೇ ರೆಬೆಲ್ ಸ್ಟಾರ್ ಅವರಿಗೂ ಕರ್ನಾಟಕ ರತ್ನ ಪ್ರದಾನವಾಗಲಿ ಎನ್ನುವುದು ಅವರ ಅಭಿಮಾನಿಗಳ ಮನವಿಯಾಗಿದೆ.

Share This Article