ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ; ಬೆಂಗಳೂರು ಟರ್ಫ್ ಕ್ಲಬ್‌ ಸುತ್ತಮುತ್ತ ಕುದುರೆ, ಕತ್ತೆ, ಹೇಸರಗತ್ತೆ ಚಲನವಲನಕ್ಕೆ ನಿರ್ಬಂಧ

1 Min Read

– ಏನಿದು ಗ್ಲಾಂಡರ್ಸ್ ರೋಗ? ಮನುಷ್ಯರಿಗೆ ಏನು ಅಪಾಯ?

- Advertisement -

ಬೆಂಗಳೂರು: ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ (Glanders Disease) ಕಂಡುಬಂದಿದ್ದು, ಬೆಂಗಳೂರು ಟರ್ಫ್ ಕ್ಲಬ್‌ನ (Turf Club) ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನಕ್ಕೆ ನಿರ್ಬಂಧ ವಿಧಿಸಲಾಗಿದೆ.

- Advertisement -

ಟರ್ಪ್ ಕ್ಲಬ್ ಸುತ್ತಮುತ್ತ ಗ್ಲಾಂಡರ್ಸ್ ರೋಗ ಪೀಡಿತ ಪ್ರದೇಶವೆಂದು ಘೋಷಿಸಿರುವ ಭಾಗದಲ್ಲಿ ಕುದುರೆ ಮತ್ತು ಕುದುರೆ ಜಾತಿಗೆ ಸೇರಿದ ಪ್ರಾಣಿಗಳ ಚಲನವಲನ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ-ದಾದರ್, ಹುಬ್ಬಳ್ಳಿ-ವಿಜಯವಾಡ ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಸೇರ್ಪಡೆ

- Advertisement -

- Advertisement -

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿರುವ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ದೃಢಪಟ್ಟಿದೆ. ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಭಂದಕ ಮತ್ತು ನಿಯಂತ್ರಣ ಅಧಿನಿಯಮ 2009 ರ ಕಾಲಂ-6 ರಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಟರ್ಫ್ ಕ್ಲಬ್ ಅನ್ನು ಗ್ಲಾಂಡರ್ಸ್ ಕೇಂದ್ರೀಕೃತ ಸ್ಥಳ (Epic Centre) ಎಂದು ಗುರುತಿಸಲಾಗಿದೆ.

ಬೆಂಗಳೂರು ಟರ್ಫ್ ಕ್ಲಬ್‌ನ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವನ ಹಾಗೂ ಪ್ರಾಣಿಗಳ ಮನೋರಂಜನೆ ಮೆರವಣೆಗೆ ಶುಭಕಾರ್ಯಗಳು ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ – ಬಿಜೆಪಿ ವಕ್ತಾರ ಗೌರವ್ ಭಾಟಿಯಾ

ಏನಿದು ಗ್ಲಾಂಡರ್ಸ್ ರೋಗ? ಮನುಷ್ಯರಿಗೆ ಏನು ಅಪಾಯ?
* ಗ್ಲಾಂಡರ್ಸ್ ಒಂದು ಸಾಂಕ್ರಾಮಿಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಕುದುರೆಗಳು, ಕತ್ತೆಗಳು ಮತ್ತು ಹೇಸರಗತ್ತೆಗಳಿಗೆ ಸೋಂಕು ತರುತ್ತದೆ.
* ಇದು ಬರ್ಖೋಲ್ಡೆರಿಯಾ ಮಲ್ಲಿ ಎಂಬ ಬ್ಯಾಕ್ಟೀರಿಯದಿಂದ ಉಂಟಾಗುತ್ತದೆ.
* ಶ್ವಾಸನಾಳ ಮತ್ತು ಶ್ವಾಸಕೋಶಗಳಲ್ಲಿ, ಪ್ರತ್ಯೇತ ಪ್ರಕರಣಗಳಲ್ಲಿ ಗಂಟುಗಳು ಮತ್ತು ಹುಣ್ಣುಗಳನ್ನು ಉಂಟುಮಾಡುತ್ತದೆ.
* ಉಲ್ಬಣವಾದರೆ ಸಾವು ಕೂಡ ಸಂಭವಿಸುತ್ತದೆ.
* ಈ ಗ್ಲಾಂಡರ್ಸ್ ರೋಗ, ಮನುಷ್ಯರಿಗೂ ಹರಡುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಸೋಂಕು ಪೀಡಿತ ಪ್ರಾಣಿಯ ಸಂಪರ್ಕಕ್ಕೆ ಬರುವ ಪ್ರಾಣಿ ನಿರ್ವಾಹಕರು ಅಥವಾ ಅಕ್ಕಪಕ್ಕದವರು ಸೋಂಕಿಗೆ ತುತ್ತಾಗುವ ಅಪಾಯವಿದೆ‌.

Share This Article