ರಾಜಕೀಯ ಅರ್ಥವಾಗದಿದ್ದರೆ ಮನೆಗೆ ಹೋಗಿ ಅಡುಗೆ ಮಾಡು – ಸುಪ್ರಿಯಾ ಸುಳೆ ವಿರುದ್ಧ ಬಿಜೆಪಿ ನಾಯಕ ಲೇವಡಿ

Public TV
2 Min Read

ಮುಂಬೈ: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್, ಸಂಸದೆ ಸುಪ್ರಿಯಾ ಸುಳೆ ವಿರುದ್ಧ `ರಾಜಕೀಯ ಅರ್ಥವಾಗದಿದ್ದರೆ, ಮನೆ ಹೋಗಿ ಅಡುಗೆ ಮಾಡು’ ಎಂಬ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದು ಭಾರೀ ಟೀಕೆಗೆ ಗುರಿಯಾಗಿದ್ದಾರೆ.

ಈ ಕುರಿತು ಮಾತನಾಡಿರುವ ಚಂದ್ರಕಾಂತ್ ಪಾಟೀಲ್, ನೀವೇಕೆ ರಾಜಕೀಯದಲ್ಲಿದ್ದೀರಿ? ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕಾದರೂ ಹೋಗಿ, ಆದರೆ ನಮಗೆ ಒಬಿಸಿ ಕೋಟಾ ಕೊಡಿಸಿ. ಲೋಕಸಭಾ ಸದಸ್ಯರಾಗಿದ್ದರೂ ಒಬ್ಬ ಸಿಎಂ ಅಪಾಯಿಂಟ್ಮೆಂಟ್ ಪಡೆಯುವುದು ಹೇಗೆಂದು ನಿಮಗೆ ತಿಳಿದಿಲ್ವೆ ಎಂದು ಪ್ರಶ್ನಿಸಿ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಇಂದು ಮುಸ್ಲಿಂ ಮಂಡಳಿ ಅರ್ಜಿ ವಿಚಾರಣೆ

Chandrakanth patil vs supriya

ಇದರಿಂದ ಪಾಟೀಲ್ ವಿರುದ್ಧ ಮುಗಿಬಿದ್ದಿರುವ ಎನ್‌ಸಿಪಿ ನಾಯಕರು, ಮೊದಲು ನೀವು ಚಪಾತಿ ಒತ್ತುವುದನ್ನು ಕಲಿಯಿರಿ ಮತ್ತು ನಿಮ್ಮ ಪತ್ನಿಗೆ ಅಡುಗೆ ಮಾಡಲು ಸಹಾಯ ಮಾಡಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಯಾಸಿನ್ ಮಲಿಕ್ ಕರಾಳ ಇತಿಹಾಸ ಏನು? ಏನೇನು ಅಪರಾಧ ಎಸಗಿದ್ದ?

ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್, `ನನ್ನ ಸಹೋದರಿಯ ವಿರುದ್ಧ ಆ ರೀತಿ ಕೆಟ್ಟದಾಗಿ ಮಾತನಾಡುವ ಹಕ್ಕು ಅವರಿಗಿಲ್ಲ. ಅವರು ಹಾಗೆ ಮಾತನಾಡಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Supriya sule

ಚಂದ್ರಕಾಂತ್ ಪಾಟೀಲ್ ಹೇಳಿಕೆ ವಿರುದ್ಧ ಕಿಡಿ ಕಾರಿರುವ ಸುಪ್ರಿಯಾ ಪತಿ ಸದಾನಂದ್ ಸುಳೆ, ಗೃಹಿಣಿ, ತಾಯಿ ಮತ್ತು ಯಶಸ್ವಿ ರಾಜಕಾರಣಿಯಾಗಿರುವ, ಭಾರತದ ಇತರ ಅನೇಕ ಕಠಿಣ ಪರಿಶ್ರಮಿ ಹಾಗೂ ಪ್ರತಿಭಾವಂತ ಮಹಿಳೆಯರಲ್ಲಿ ಒಬ್ಬರಾಗಿರುವ ನನ್ನ ಹೆಂಡತಿಯ ಬಗ್ಗೆ ನನಗೆ ಹೆಮ್ಮೆ ಇದೆ. ಆದರೆ ಬಿಜೆಪಿಯು ಸ್ತ್ರೀದ್ವೇಷಿ ಪಕ್ಷವಾಗಿದ್ದು, ಯಾವಾಗಲೂ ಮಹಿಳೆಯನ್ನು ಹೀಯಾಳಿಸುತ್ತದೆ. ಇದು ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮೊದಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಅವರು ಸಭೆಯೊಂದರಲ್ಲಿ ಮಾತನಾಡುತ್ತಾ, ಬಿಜೆಪಿ ಆಡಳಿತದಲ್ಲಿರುವ ಮಧ್ಯಪ್ರದೇಶ ಸರ್ಕಾರವು ಸ್ಥಳೀಯ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ಪಡೆದುಕೊಂಡಿದ್ದ ಬಗ್ಗೆ ತಿಳಿಯಲು ಅಲ್ಲಿನ ಸಿಎಂ ಅನ್ನು ಭೇಟಿಯಾಗಲು ತೆರಳಿದ್ದೆವು. ಆದರೆ, ಅವರು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ವಂದೇ ಮಾತರಂಗೆ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಅಶ್ವಿನಿ ಉಪಾಧ್ಯಾಯ ವಿರುದ್ಧ ‘ಹೈ’ ಗರಂ

ಮಧ್ಯಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ಬಂದು ಕೆಲವರನ್ನು ಭೇಟಿ ಮಾಡಿದರು. ಅದಾದ ಎರಡೇ ದಿನಗಳಲ್ಲಿ ಸ್ಥಳೀಯ ಚುನಾವಣೆಗೆ ಅವರು ಒಬಿಸಿ ಮೀಸಲಾತಿ ಪಡೆದುಕೊಂಡರು. ಇದು ಹೇಗೆ ಸಾಧ್ಯವಾಯಿತೆಂದು ನನಗೆ ತಿಳಿದಿಲ್ಲ ಎಂದು ಸುಪ್ರಿಯಾ ಸುಳೆ ಕಳವಳ ವ್ಯಕ್ತಪಡಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *