ಮಂಗಳೂರು: ಕಾಂತಾರ ಚಿತ್ರದ (Kantara Chapter 1) ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಪೆರಾರ ಶ್ರೀ ಬ್ರಹ್ಮ ದೇವರು ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಹೇಳಿದೆ.
ತುಳುನಾಡಿನಲ್ಲಿ ಕಾಂತಾರ v/s ದೈವರಾಧಕರು ಫೈಟ್ ವಿಚಾರ ಜೋರಾಗುತ್ತಿದ್ದಂತೆ ಈಗ ದೈವದ ನುಡಿ ಕುರಿತು ದೈವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
“ಹುಚ್ಚು ಕಟ್ಟಿದವರನ್ನ ಹುಚ್ಚು ಕಟ್ಟಿಸುತ್ತೇನೆ.. ಹಣವನ್ನ ಆಸ್ಪತ್ರೆಗೆ ಸುರಿಸುತ್ತೇನೆ” ಎಂದು ದೈವ ನುಡಿದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ನುಡಿ ಜೋರಾಗುತ್ತಿದ್ದಂತೆ ವಾದ ವಿವಾದ ಆರಂಭವಾಗಿತ್ತು. ಕಾಂತಾರ ಸಿನಿಮಾ ಹಾಗೂ ದೈವದ ಅನುಕರಣೆ ಮಾಡಿದವರಿಗೆ ಎಚ್ಚರಿಕೆ ಎಂದು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ದೈವಸ್ಥಾನದ ಆಡಳಿತ ಮಂಡಳಿಯಿಂದಲೇ ಸ್ಪಷ್ಟನೆ ನೀಡಿ ವಿಷಯಕ್ಕೆ ಇತೀಶ್ರೀ ಹಾಡಲು ಮುಂದಾಗಿದೆ.
ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಮಂಗಳೂರು ತಾಲೂಕು ಶ್ರೀ ಬ್ರಹ್ಮ ದೇವರು -ಇಷ್ಟ ದೇವತಾ ಬಲವಾಂಡಿ ಪಿಲಿಚಾಂಡಿ ದೈವಸ್ಥಾನ -ಪಡುಪೆರಾರ ಕ್ಷೇತ್ರದಲ್ಲಿ ನಡೆದ ಬಲವಾಂಡಿ-ಪಿಲಿಚಾಂಡಿ ದೈವಗಳ ಪುದರ್ -ಮೆಚ್ಚಿ ಜಾತ್ರೆ ಸಮಯದ ದೈವಪಾತ್ರಿ ದರ್ಶನ -ದೈವದ ನಡೆ-ನುಡಿಗಳ ಬಗ್ಗೆ ಉಂಟಾದ ಗೊಂದಲ-ಭಿನ್ನಾಭಿಪ್ರಾಯ ವಿಚಾರದಲ್ಲಿ ಆಡಳಿತ ಮಂಡಳಿಯ ಸ್ಪಷ್ಟಿಕರಣ ನೀಡುತ್ತಿದೆ. ಇದನ್ನೂ ಓದಿ: ಕಾಂತಾರ ಚಾಪ್ಟರ್ 1 ಬ್ಲಾಕ್‌ಬಸ್ಟರ್ ಹಿಟ್; 2 ವಾರದಲ್ಲಿ 717 ಕೋಟಿ ಕಲೆಕ್ಷನ್
ಶ್ರೀ ಬ್ರಹ್ಮ ದೇವರು -ಇಷ್ಟ ದೇವತಾ ಬಲವಾಂಡಿ -ಪಿಲಿಚಾಂಡಿ ದೈವಸ್ಥಾನ, ಪಡುಪೆರಾರ-ಕ್ಷೇತ್ರದಲ್ಲಿ ಶತಮಾನದ ಕಾಲದ ಕಟ್ಟು ಕಟ್ಟುಳೆಯಂತೆ, ಗುತ್ತು ಬರ್ಕೆ ಮಹನೀಯರು ಹಾಗೂ ಗ್ರಾಮಸ್ಥರು, ಸಾರ್ವಜನಿಕರ ಕೂಡವಿಕೆಯಿಂದ ನಡೆಸಲ್ಪಡುವ ಪುರ್-ಮೆಚ್ಚಿ ಜಾತ್ರೆಯು ಇತ್ತೀಚಿಗೆ ಕ್ಷೇತ್ರದಲ್ಲಿ ನಡೆದಿರುತ್ತದೆ. ಈ ಸಂದರ್ಭದಲ್ಲಿ ದೈವದ ಪಾತ್ರಿ-ದೈವವು ನೀಡಿದ ಅಭಯ -ನಡೆ-ನುಡಿಗಳ ವಿಚಾರದಲ್ಲಿ ಗೊಂದಲ ಭಿನ್ನಾಭಿಪ್ರಾಯ ಏರ್ಪಟ್ಟಿರುವುದು ಕ್ಷೇತ್ರದ ಆಡಳಿತ ಮಂಡಳಿಯ ಗಮನಕ್ಕೆ ಬಂದಿರುತ್ತದೆ. ಇದನ್ನೂ ಓದಿ: 100 ಕೋಟಿ ನಾಯಿ ಲಾಂಚ್ ಮಾಡ್ತೀನಿ- ಸವಾಲೆಸೆದ ಬಿಗ್‌ಬಾಸ್ ಸ್ಪರ್ಧಿ ಸತೀಶ್
ಮೇಲಿನಂತೆ ಶ್ರೀ ಕ್ಷೇತ್ರ ಪೆರಾರದದಲ್ಲಿ ನಡೆದ ಜಾತ್ರ ಸಂದರ್ಭದಲ್ಲಿನ ದೈವ ನಡೆ-ನುಡಿಯಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಗಳು /ಚಲನಚಿತ್ರದ ಬಗ್ಗೆ ಯಾವುದೇ ಅಭಯ-ನುಡಿ ನೀಡುವ ಸಂದರ್ಭ ಬಂದಿರುವ ಕಾರಣ, ಪ್ರಕೃತ ಈ ವಿಚಾರದಲ್ಲಿನ ಗೊಂದಲ-ಭಿನ್ನಾಭಿಪ್ರಾಯಗಳಿಗೆ ಅಲ್ಲದೇ ಈ ಗೊಂದಲ ಶ್ರೀ ಕ್ಷೇತ್ರದ ದೈವ-ದೇವರು-ಆಡಳಿತ ಮಂಡಳಿಯು ಹೊಣೆಗಾರರಲ್ಲವೆಂದು ಈ ಮೂಲಕ ಸ್ಪಷ್ಟಪಡಿಸಲಾಗುತ್ತಿದೆ.