ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯನ್ನ ಕಳುಹಿಸಿದ್ದಾ; ಸಿಎಂ ಪ್ರಶ್ನೆ

Public TV
4 Min Read

ಬೆಂಗಳೂರು: ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯವರನ್ನ ಕಳುಹಿಸಿದ್ದಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (Siddaramaiah) ಪ್ರಶ್ನಿಸಿದ್ದಾರೆ.

ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಗಾಂಧಿಭವನದಲ್ಲಿ ಹಮ್ಮಿಕೊಂಡಿದ್ದ ʻಮಹಿಳಾ ಮೀಸಲಾತಿʼ (Women’s Reservation) ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಈ ಕುರಿತ ಮಾಹಿತಿಯನ್ನು ತಮ್ಮ ಟ್ವಿಟ್ಟರ್‌ (ಎಕ್ಸ್)‌ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?
ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ. ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಬಿಜೆಪಿಗೆ ಇದ್ದಿದ್ದರೇ ಇಷ್ಟೊಂದು ಅಡೆತಡೆಗಳನ್ನ ಹಾಕುತ್ತಿರಲಿಲ್ಲ. ಇದನ್ನೂ ಓದಿ: ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ 15 ವರ್ಷ ಆಯಸ್ಸು ಫಿಕ್ಸ್ ಮಾಡಿದೆ. ಕಾಯ್ದೆ ಜಾರಿಯಾದ ದಿನದಿಂದ 15 ವರ್ಷ ಆಯಸ್ಸು ಇದೆ. ಅಂದರೆ ಈಗ ಕಾಯ್ದೆ ಜಾರಿ ಆಗಿದೆ. ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ, ಜಾತಿ ಜನಗಣತಿ ಮತ್ತು ಡೀಲಿಮಿಟೇಷನ್ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ. ಇವರೆಡೂ ಮುಗಿಯುವ ವೇಳೆಗೆ 15 ವರ್ಷ ಆಗಿರುತ್ತದೆ. ಹೀಗಾಗಿ ಮಹಿಳಾ ಮೀಸಲಾತಿ ಕಾಯ್ದೆಯಾಗಿ ಜಾರಿ ಆಗುವ ಮೊದಲೇ ಅದರ ಆಯಸ್ಸು ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ.

ಮಹಿಳಾ ಮೀಸಲಾತಿ ಜಾರಿ ಮಾಡುವುದಕ್ಕೆ ದೇವರೇ ನನ್ನನ್ನು ಕಳುಹಿಸಿದ್ದು ಎಂದು ಪ್ರಧಾನಿ ಮೋದಿಯವರು ತಮ್ಮ ಭಾಷಣದಲ್ಲಿ ಮೊನ್ನೆ ಹೇಳಿದರು. ಈಗ ನೋಡಿದ್ರೆ ಈ ರೀತಿ ಮಹಿಳೆಯರಿಗೆ ವಂಚನೆ ಆಗಿದೆ. ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯವರನ್ನು ಕಳುಹಿಸಿದ್ದು? ಮಹಿಳಾ ಮೀಸಲಾತಿ ಬಿಲ್ ಸಿದ್ಧಪಡಿಸಿದ್ದು ಕಾಂಗ್ರೆಸ್, ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಇದೆ. ಮಹಿಳಾ ಮೀಸಲಾತಿಯಲ್ಲೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ಇರಬೇಕು ಎನ್ನುವುದಕ್ಕೆ ನನ್ನ ಪೂರ್ಣ ಬೆಂಬಲ ಇದೆ. ಅದರಲ್ಲೂ 33% ಮಾತ್ರವಲ್ಲ, 50% ರಷ್ಟು ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ ಇದೆ. ಇದನ್ನೂ ಓದಿ: Asian Games 2023: ಭಾರತಕ್ಕೆ ಮೂರು ಬೆಳ್ಳಿ, ಎರಡು ಕಂಚಿನ ಪದಕ

ಈಗ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024ರಲ್ಲೂ ಜಾರಿ ಆಗುವುದಿಲ್ಲ. 2029ರಲ್ಲೂ ಜಾರಿ ಆಗುವುದಿಲ್ಲ, 2034ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ. ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ ಶಿಕ್ಷಣದಲ್ಲಿ ಅವಕಾಶ ದೊರೆಯಿತು. ಅವಕಾಶ ಸಿಕ್ಕಿದ್ದರಿಂದ ಪುರುಷರಿಗಿಂತ ಶಿಕ್ಷಣದಲ್ಲಿ ಮುಂದಿದ್ದಾರೆ. ಮಹಿಳಾ ಮೀಸಲಾತಿ ಜಾರಿ ಆಗಿಬಿಟ್ಟಿತು ಎಂದು ಸುಳ್ಳು ನಂಬಿಕೊಂಡು ಸುಳ್ಳು ಚಪ್ಪಾಳೆ ಹೊಡೀಬೇಡಿ. ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು, ನೀವೆಲ್ಲಾ ಹೋರಾಟ ಮುಂದುವರೆಸಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ರಾಜಕೀಯ ವಿಶ್ಲೇಷಕ ಪ್ರೊ.ಮುಜಾಫರ್ ಅಸಾದಿ, ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್, ಶಾಸಕಿ ನಯನ ಮೋಟಮ್ಮ, ನ್ಯಾಯವಾದಿ ಅಶ್ವಿನಿ ಓಬಳೇಶ್, ಹಿಂದುಳಿದ ವರ್ಗಗಳ ಒಕ್ಕೂಟದ ನಾಯಕ ಕೆ.ಎಂ.ರಾಮಚಂದ್ರಪ್ಪ, ದಲಿತ ಹೋರಾಟಗಾರ ಮಾವಳ್ಳಿ ಶಂಕರ್, ನ್ಯಾಯವಾದಿ ಎನ್.ಅನಂತ ನಾಯಕ್, ಚುಕ್ಕಿ ನಂಜುಂಡಸ್ವಾಮಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್