ದುರ್ಗಾದೇವಿ ದೇವಸ್ಥಾನಕ್ಕೆ ಬಿಟ್ಟಿದ್ದ ದೇವಿಯ ಕೋಣ ನಾಪತ್ತೆ- ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

Public TV
1 Min Read

ಹಾವೇರಿ: ದುರ್ಗಾದೇವಿ (Durga Devi) ದೇವಸ್ಥಾನಕ್ಕೆ ಬಿಟ್ಟಿದ್ದ ದೇವಿಯ ಕೋಣ (Buffalo) ಕಾಣೆಯಾಗಿದ್ದು, ಕೋಣವನ್ನು ಹುಡುಕಿಕೊಡುವಂತೆ ಗ್ರಾಮಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಹಾವೇರಿ (Haveri) ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ನಡೆದಿದೆ.

ಕಳೆದ ಕೆಲವು ವರ್ಷಗಳಿಂದ ಗ್ರಾಮದ ದೇವಿಗೆ ಹಬ್ಬದ ಕೋಣವನ್ನು ಬಿಡಲಾಗಿತ್ತು. ಆದರೆ ಕಳೆದ ಎರಡು ತಿಂಗಳಿನಿಂದ ಕೋಣ ನಾಪತ್ತೆಯಾಗಿದೆ. ಗ್ರಾಮದ ಜನರು ಕೋಣವನ್ನು ಹುಡುಕಾಡಿ ಸಿಗದೇ ಇದ್ದಾಗ ಕಾಣೆಯಾಗಿರುವ ದೇವರ ಕೋಣವನ್ನು ಹುಡುಕಿ ಕೊಡುವಂತೆ ರಟ್ಟೀಹಳ್ಳಿ ಠಾಣೆಗೆ ದೌಡಾಯಿಸಿ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್ – ಮಹಿಳಾ ಕಾರ್ಮಿಕರು ಸಿಗದೇ ರೈತರ ಪರದಾಟ

ಕಳೆದ ಎರಡು ತಿಂಗಳಿನಿಂದ ಗ್ರಾಮಸ್ಥರು ಹುಡುಕುವ ಕೆಲಸ ಮಾಡಿದ್ದಾರೆ. ಅದರೂ ಕೋಣ ಪತ್ತೆಯಾಗಿಲ್ಲ. ಗ್ರಾಮದ ಸುತ್ತಮುತ್ತಲಿನ ಗ್ರಾಮ ಸೇರಿದಂತೆ ಹಲವು ಗ್ರಾಮಕ್ಕೆ ಹೋಗಿ ಹುಡುಕಾಟ ಮಾಡಿದ್ದಾರೆ. ಆದರೂ ದೇವರ ಕೋಣ ಪತ್ತೆಯಾಗಿಲ್ಲ. ಹೀಗಾಗಿ ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ಪತ್ತೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: 30,000 ಕೊಟ್ರೆ ಕೆಲಸ, 40,000 ಕೊಟ್ರೆ ಟ್ರ‍್ಯಾಕ್ ಟೆಸ್ಟ್ ಪಾಸ್ – KSRTC ಚಾಲಕರ ಹೊರಗುತ್ತಿಗೆ ನೌಕರಿಯಲ್ಲೂ ಗೋಲ್ಮಾಲ್?

Share This Article