ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

2 Min Read

ಬೆಂಗಳೂರು: ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ (Gold Rate, Silver Price) ಭಾರೀ ಏರಿಕೆ ಕಂಡಿದೆ. ಇರಾನ್ – ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು (Iran_Israel_America war) ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ? ಎಂಬ ಬಗ್ಗೆ ಇಲ್ಲಿ ಮಾಹಿತಿ ಇದೆ.

24 ಕ್ಯಾರೆಟ್ ಚಿನ್ನದ ಬೆಲೆ: ಏಪ್ರಿಲ್ 8 ರಂದು 24 ಕ್ಯಾರೆಟ್ ಚಿನ್ನದ ಬೆಲೆ ಭಾರೀ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,382 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,53,820 ರೂ. ಆಗಿದೆ. ಏ.7ಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 398 ರೂ. ಹಾಗೂ 10 ಗ್ರಾಂಗೆ 3,980 ರೂ. ಏರಿಕೆಯಾಗಿದೆ. ಇದನ್ನೂ ಓದಿ: ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,100 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,41,000 ರೂ. ಆಗಿದೆ. ಏ.7ಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆ 365 ರೂ. ಹಾಗೂ 10 ಗ್ರಾಂನ ಮೇಲೆ 3,650 ರೂ. ಹೆಚ್ಚಳವಾಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 24 ಕ್ಯಾರೆಟ್ ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆಯೇ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,537 ರೂ. ಹಾಗೂ 10 ಗ್ರಾಂನ ಮೇಲೆ 1,15,370 ರೂ. ಆಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 299 ರೂ. ಹಾಗೂ 10 ಗ್ರಾಂನ ಮೇಲೆ 2,990 ರೂ. ಹೆಚ್ಚಳವಾಗಿದೆ.

ಚಿನ್ನದೊಂದಿಗೆ ಬೆಳ್ಳಿಯ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. ಒಂದು ಗ್ರಾಂ ಬೆಳ್ಳಿಗೆ 10 ರೂ. ಏರಿಕೆಯಾಗಿದೆ. ಈ ಮೂಲಕ ಒಂದು ಗ್ರಾಂ ಬೆಲೆ 260 ರೂ. ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆ 2.60 ಲಕ್ಷ ರೂ. ಆಗಿದೆ. ಏ.7 ರಂದು ಬೆಳ್ಳಿ ಬೆಲೆ ಕೇಜಿಗೆ 2,50,000 ರೂ. ಇತ್ತು. ಇದನ್ನೂ ಓದಿ: ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Share This Article