ಮೈಸೂರು | ಹುಣಸೂರಿನಲ್ಲಿ ಹಾಡಹಗಲೇ ಗನ್‌ ತೋರಿಸಿ ಚಿನ್ನದಂಗಡಿ ದರೋಡೆ

1 Min Read

ಮೈಸೂರು: ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. 5 ಕ್ಕೂ ಹೆಚ್ಚು ಜನರ ಗ್ಯಾಂಗ್‌ವೊಂದು ಏಕಾಏಕಿ ಚಿನ್ನದಂಗಡಿಗೆ ನುಗ್ಗಿ ಬರೋಬ್ಬರಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿದೆ.

ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಯಲ್ಲಿ ದರೋಡೆ ನಡೆದಿದೆ. ದರೋಡೆಕೋರರು ಗನ್‌ ತೋರಿಸಿ ಸುಮಾರು 4 ರಿಂದ 5 ಕೋಟಿ ಮೌಲ್ಯದಷ್ಟು ಚಿನ್ನ-ವಜ್ರಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸಾರ್ವಕಾಲಿಕ ದಾಖಲೆ ಬರೆದ ಬೆಳ್ಳಿ – 1 ಕೆ.ಜಿಗೆ 2.5 ಲಕ್ಷ ರೂ, ಹಿಂದಿನ ರೆಕಾರ್ಡ್‌ಗಳೆಲ್ಲ ಉಡೀಸ್

ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ; ಮುಖಕ್ಕೆ ಕಪ್ಪು ಬಟ್ಟೆ ಮುಚ್ಚಿ, ಕೈ ಕಟ್ಟಿಕೊಂಡು ಜೈಲಿಂದ ಬಂದು ನಾಮಪತ್ರ ಸಲ್ಲಿಸಿದ ಗ್ಯಾಂಗ್‌ಸ್ಟರ್‌

Share This Article