ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

Public TV
1 Min Read

ನವದೆಹಲಿ/ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣಕ್ಕೆ (Gold Smuggling Case) ಸಂಬಂಧಿಸಿದಂತೆ ರನ್ಯಾ ರಾವ್‌ಗೆ (Ranya Rao) ಸಂಬಂಧಿಸಿದಂತೆ ಬೆಂಗಳೂರು ಮತ್ತು ತುಮಕೂರಿನಲ್ಲಿರುವ ಒಟ್ಟು 34.12 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿದೆ.

ವಿಕ್ಟೋರಿಯಾ ಲೇಔಟ್ ಮನೆ, ಅರ್ಕಾವತಿ ಲೇಔಟ್ ನ ಪ್ಲಾಟ್, ಶಿರಾದ ಇಂಡಸ್ಟ್ರಿಯಲ್ ಲ್ಯಾಂಡ್, ಆನೇಕಲ್ ನ ಕೃಷಿ ಭೂಮಿ ಸೇರಿದಂತೆ 34.12 ಕೋಟಿ ರೂ. ಆಸ್ತಿಯನ್ನು ಇಡಿ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಮಳೆ ಪ್ರಮಾಣದಲ್ಲಿ ಚಿರಾಪುಂಜಿ, ಆಗುಂಬೆಯನ್ನು ಹಿಂದಿಕ್ಕಿದ ಉಡುಪಿ

 

ಇಡಿ ಹೇಳಿದ್ದೇನು?
ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು ಮತ್ತು ಇತರರು ದುಬೈ, ಉಗಾಂಡಾ ಮತ್ತು ಬೇರೆ ದೇಶಗಳಲ್ಲಿರುವ ಪೂರೈಕೆದಾರರಿಂದ ಚಿನ್ನವನ್ನು ಖರೀದಿಸಿ ಹವಾಲಾ ಮಾರ್ಗದ ಮೂಲಕ ನಗದು ಹಣವನ್ನು ಪಾವತಿಸುತ್ತಿದ್ದರು. ಇದನ್ನೂ ಓದಿ: ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ ಭಾರತೀಯರಿಗೂ ಕಾದಿದೆ ಆಘಾತ

ಕಳ್ಳಸಾಗಣೆ ಮಾಡಿದ ಚಿನ್ನವನ್ನು ಭಾರತದೊಳಗೆ ಆಭರಣ ವ್ಯಾಪಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಗದು ರೂಪದಲ್ಲಿ ಮಾರಾಟ ಮಾಡಲಾಗಿತ್ತು. ಈ ಹಣ ಮತ್ತೆ ಚಿನ್ನ ತರಲು ಬಳಕೆಯಾಗುತ್ತಿತ್ತು.

ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳು ಮತ್ತು ಡಿಜಿಟಲ್ ಸಾಧನಗಳ ಮೂಲಕ ವಿದೇಶದಲ್ಲಿರುವ ವಿದೇಶಿ ಚಿನ್ನದ ಪೂರೈಕೆದಾರರು, ಹವಾಲಾ ನಿರ್ವಾಹಕರು ಮತ್ತು ದುಬೈ ಮೂಲದ ಕಸ್ಟಮ್ಸ್ ಏಜೆಂಟ್‌ಗಳೊಂದಿಗೆ ಆರೋಪಿಗಳು ಸಂವಹನ ನಡೆಸಿರುವುದು ದೃಢಪಟ್ಟಿದೆ ಎಂದು ಇಡಿ ಹೇಳಿದೆ.

Share This Article