ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್

1 Min Read

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ (Gold Smuggling Case) ಜೈಲು ಸೇರಿದ್ದ ನಟಿ ರನ್ಯಾ ರಾವ್ (Ranya Rao) ಇಂದು (ಏ.22) ಜೈಲಿನಿಂದ ರಿಲೀಸ್ ಆಗಲಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ರನ್ಯಾ ರಾವ್ 102 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಿದ್ದ ಆರೋಪದಲ್ಲಿ ಜೈಲು ಸೇರಿದ್ದರು. ಈ ಹಿಂದೆ ಕೋರ್ಟ್‌ನಿಂದ ಜಾಮೀನು ಸಿಕ್ಕಿತ್ತು. ಆದರೆ ಕಾಫಿಪೋಸಾ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇದನ್ನೂ ಓದಿ:‘ಮಾಣಿಕ್ಯ’ ಸಿನಿಮಾ ನಟಿ ರನ್ಯಾ ರಾವ್ ಫ್ಲಾಟ್‌ ಮೇಲೆ ದಾಳಿ – ಕೋಟಿ ಕೋಟಿ ಮೌಲ್ಯದ ಚಿನ್ನ ವಶ

ಕಾಫಿಪೋಸಾ ಜಾರಿಯಾಗಿ ಇಂದಿಗೆ ಒಂದು ವರ್ಷ ಆಗಿದೆ. ಸಾಮಾನ್ಯವಾಗಿ ಕಳ್ಳಸಾಗಣೆ ಆರೋಪ ಹೊತ್ತಿರುವವರಿಗೆ ಕಾಫಿಪೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅದರಂತೆ ಇಂದು ಕಾಫಿಪೋಸಾ ಅಂತ್ಯಗೊಂಡಿದ್ದು, ಜೈಲಿನಿಂದ ಇಂದು ಸಂಜೆ ಬಿಡುಗಡೆಯಾಗಲಿದ್ದಾರೆ.

Share This Article