ಒಂದು ಕೆಜಿ ಮೋದಕದ ಬೆಲೆ ಬರೋಬ್ಬರಿ 12,000 ರೂಪಾಯಿ

Public TV
2 Min Read

ಮುಂಬೈ: ಗಣಪತಿ ಮೋದಕ ಪ್ರಿಯ ಎಂಬುದು ಪುರಾಣದಲ್ಲೇ ಉಲ್ಲೇಖವಾಗಿದೆ. ಹೀಗಾಗಿ ಗಣೇಶ ಚತುರ್ಥಿಯಂದು (Ganesh festival)  ವಿವಿಧ ರೀತಿಯ ಮೋದಕಗಳನ್ನು ತಯಾರಿಸುವುದು ಸಾಮಾನ್ಯ. ಆದರೆ ಈ ಮೋದಕದ ಬೆಲೆಯನ್ನು ಕೇಳಿದವರು ಆಶ್ಚರ್ಯವಾಗುವುದರ ಜೊತೆಗೆ ವಿಶೇಷತೆ ಏನು ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಗಣೇಶ ಹಬ್ಬದ ಸಂಭ್ರಮ ಇನ್ನೂ ಮುಗಿದಿಲ್ಲ. ಸುಮಾರು 10 ದಿನಗಳ ಕಾಲ ಗಣೇಶ ಚತುರ್ಥಿ ಸಂಭ್ರಮ, ಹಾಡು, ಪೂಜೆ ಇದ್ದೇ ಇರುತ್ತದೆ. ಇದೀಗ ಈ ವರ್ಷ ನಾಸಿಕ್‌ನಲ್ಲಿರುವ ಒಂದು ಸಿಹಿತಿಂಡಿಯ ಅಂಗಡಿಯಲ್ಲಿ ಈ ಮೋದಕ ವಿಶೇಷವಾಗಿ ಗ್ರಾಹಕರನ್ನು ಸೆಳೆಯುತ್ತಿದೆ. ಮೋದಕ ಎಷ್ಟು ದುಬಾರಿಯೆಂದರೆ, ಒಂದು ಕೆಜಿ ಮೋದಕದ ಬೆಲೆ ಬರೋಬ್ಬರಿ 12,000 ರೂಪಾಯಿ ಆಗಿದೆ. ಇದನ್ನೂ ಓದಿ: ಪಂಜಾಬ್ ಸಿಎಂ ಚರಣ್‍ಜಿತ್ ಸಿಂಗ್ ಛನ್ನಿ ಮೇಲೆ 2018ರಲ್ಲಿ ಮೀಟೂ ಆರೋಪ!

ಮೋದಕದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ ದೀಪಕ್ ಚೌಧರಿ, ಈ ಬಂಗಾರದ ಮೋದಕಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಭರ್ಜರಿ ಮಾರಾಟವಾಗುತ್ತಿದೆ. ಉಳಿದ 25 ವಿಧದ ಮೋದಕಕ್ಕಿಂತಲೂ ಇದೇ ಸಿಕ್ಕಾಪಟೆ ಸೇಲ್ ಆಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ:  ರಸ್ತೆ ಬದಿಯ ಹೋಟೆಲ್‍ನಲ್ಲಿ ಟೀ ಸವಿದ ಸಿಎಂ-ವೀಡಿಯೋ ವೈರಲ್

ಗಣಪ ಮೋದಕ ಪ್ರಿಯ ಎಂಬುದು ಪುರಾಣದಲ್ಲೇ ಉಲ್ಲೇಖವಾಗಿದೆ. ಗಣೇಶ ಚತುರ್ಥಿಯಂದು ವಿವಿಧ ರೀತಿಯ ಮೋದಕಗಳನ್ನು ತಯಾರಿಸುವುದು ಸಾಮಾನ್ಯ. ಗಣೇಶನಿಗಾಗಿ ಕೇಸರಿ, ಕಾಜು, ಮೋತಿಚೂರ್ ಮತ್ತು ಖೋಯಾ ಮೋದಕಗಳು ತಯಾರಾಗುತ್ತವೆ. ಆದರೆ ಸಾಗರ್ ಸ್ವೀಟ್ಸ್ ಎಂಬ ಅಂಗಡಿ ಮಾರುತ್ತಿರುವ ಮೋದಕದ ಹೆಸರು ಗೋಲ್ಡನ್ ಮೋದಕ (Golden Modaks). ಈ ಅಂಗಡಿಯಲ್ಲಿ ಸುಮಾರು 26 ವಿಧದ ಮೋದಕಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು, ಅದರಲ್ಲಿ ಬಂಗಾರದ ಮೋದಕ ಹೆಚ್ಚಿನ ಹಣ ಗಳಿಸುತ್ತಿದೆ. ಈ ಬಂಗಾರದ ಮೋದಕವನ್ನು ಜನರು ತುಂಬ ಖುಷಿಯಿಂದ ಖರೀದಿಸುತ್ತಿದ್ದಾರೆ. ಬೆಳ್ಳಿ ಮೋದಕವೂ ಸಹ ಈ ಅಂಗಡಿಯಲ್ಲಿ ಮಾರಾಟಕ್ಕಿದ್ದು, ಅದರ ಬೆಲೆ ಕೆಜಿಗೆ 1460 ರೂಪಾಯಿ ಆಗಿದೆ.

Share This Article
Leave a Comment

Leave a Reply

Your email address will not be published. Required fields are marked *