‘ಕೃಷ್ಣಂ ಪ್ರಣಯ ಸಖಿ’ಯಾಗಿ ಲವರ್‌ ಬಾಯ್‌ ಲುಕ್‌ನಲ್ಲಿ ಗೋಲ್ಡನ್‌ ಸ್ಟಾರ್‌ ಎಂಟ್ರಿ

Public TV
2 Min Read

ಸ್ಯಾಂಡಲ್ವುಡ್‌ನ (Sandalwood) ಗೋಲ್ಡನ್ ಹೀರೋ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ತಮ್ಮ ಹುಟ್ಟುಹಬ್ಬದ (ಜುಲೈ 2) ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಚೆಲ್ಲಾಟ, ಮುಂಗಾಳೆ ಮಳೆ, ಕೃಷ್ಣ ಸಿನಿಮಾಗಳ ಮೂಲಕ ಲವರ್ ಬಾಯ್ ಆಗಿ ಕಾಣಿಸಿಕೊಂಡಿದ್ದ ನಟ ಗಣೇಶ್ ಈಗ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮೂಲಕ ಮತ್ತೆ ಕೃಷ್ಣನಾಗಿ ಎಂಟ್ರಿ ಕೊಡ್ತಿದ್ದಾರೆ.

ಜುಲೈ 2ಕ್ಕೆ ಗೋಲ್ಡನ್ ಸ್ಟಾರ್ ಅಭಿಮಾನಿಗಳಿಗೆ ಡಬಲ್ ಧಮಾಕ. ಒಂದ್ ಕಡೆ ನೆಚ್ಚಿನ ನಟನ ಹುಟ್ಟುಹಬ್ಬದ (Birthday) ಸಂಭ್ರಮ, ಮತ್ತೊಂದು ಕಡೆ ಹೊಸ ಸಿನಿಮಾಗಳ ಅನೌನ್ಸ್ಮೆಂಟ್. ಒಟ್ನಲ್ಲಿ ಗೋಲ್ಡನ್ ಹೀರೋ ಗಣಿ ಸಿನಿಮಾ ಅಪ್‌ಡೇಟ್ ಜೊತೆಗೆ ನಯಾ ಲುಕ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ:ಆಂಧ್ರದಲ್ಲಿ ಮದ್ಯಪ್ರಿಯರಿಗೆ ನಟ ಪವನ್ ಕಲ್ಯಾಣ್ ಬಂಪರ್ ಆಫರ್

ಗಣೇಶ್ ಅಭಿನಯದ 41ನೇ ಸಿನಿಮಾಗೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಇಡಲಾಗಿದೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಗಣೇಶ್ ಮನೆ ಕೆಲಸ ಮಾಡುವ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್ ಧರಿಸಿ ಹೈ ಫೈ ಆಗಿರುವ ಗಣೇಶ್ ಕೈಯಲ್ಲಿ ಬಕೆಟ್, ಪೊರಕೆ, ನೆಲ ಒರೆಸುವ ಸ್ಟಿಕ್ ಹಿಡಿದು ಹೊರಟಿದ್ದಾರೆ. ಟೈಟಲ್ ಕೇಳಿದ್ರೆ ಗಣೇಶ್ ಲವರ್ ಬಾಯ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಗೊತ್ತಾಗುತ್ತಿದೆ. ಗೋಲ್ಡನ್ ಸ್ಟಾರ್ ರಗಡ್ ಲುಕ್‌ನಿಂದ ಲವರ್ ಬಾಯ್ ಪಾತ್ರಗಳ ಮೂಲಕೇ ಹೆಚ್ಚು ಗಮನ ಸೆಳೆದಿದ್ದಾರೆ.

ತ್ರಿಶೂಲ್ ಎಂಟರ್‌ಟೇನ್ಮೆಂಟ್ ಬ್ಯಾನರ್ ಮೂಲಕ ಪ್ರಶಾಂತ್ ಜಿ.ರುದ್ರಪ್ಪ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ದಂಡುಪಾಳ್ಯ’ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ರಾಜು ಈ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ಗಣೇಶ್ ಅಭಿನಯದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಗಣೇಶ್ ಅವರಿಗೆ ಜೋಡಿಯಾಗಿ ಮಾಲಿವುಡ್ ನಟಿ ಮಾಳವಿಕಾ ನಾಯರ್ (Malavika Nair) ಅಭಿನಯಿಸುತ್ತಿದ್ದಾರೆ. ಸಾಧುಕೋಕಿಲ, ಶಶಿಕುಮಾರ್, ರಂಗಾಯಣ ರಘು, ಸುಧಾರಾಣಿ, ಶ್ರುತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ, ಶ್ರೀನಿವಾಸಮೂರ್ತಿ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತಿದೆ. ಮೈಸೂರು, ರಾಜಸ್ಥಾನ ಮತ್ತು ಯುರೋಪ್‌ನಲ್ಲಿ ಕೂಡ ಶೂಟಿಂಗ್ ಮಾಡಲಾಗುವುದು. ಗಣೇಶ್ ಮತ್ತು ಶ್ರೀನಿವಾಸ್ ರಾಜು ಕಾಂಬಿನೇಷನ್ ಇರುವುದರಿಂದ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್