ವಾಹನ ಸವಾರರಿಗೆ ಗುಡ್‌ನ್ಯೂಸ್ – ಮತ್ತೆ ದಂಡ ಪಾವತಿಗೆ 50% ಡಿಸ್ಕೌಂಟ್

1 Min Read

– ನ.21ರಿಂದ ಡಿ.12ರವರೆಗೆ ಪಾವತಿಗೆ ಅವಕಾಶ

ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರ (State Govt) ಗುಡ್‌ನ್ಯೂಸ್ ಕೊಟ್ಟಿದ್ದು, ನಿಯಮ ಉಲ್ಲಂಘಿಸಿದ್ರೆ ಶೇ.50ರಷ್ಟು ದಂಡ ಪಾವತಿಸಲು ಅವಕಾಶ ನೀಡಿದ್ದಾರೆ.

ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿ ಆದೇಶ ಹೊರಡಿಸಿದ್ದು, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ನ.21ರಿಂದ ಡಿ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸಲು ರಿಯಾಯಿತಿ ಘೋಷಿಸಿದ್ದಾರೆ.ಇದನ್ನೂ ಓದಿ: ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – DRI ನಿಂದ 4,000 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಆನ್‌ಲೈನ್ ಪೇಮೆಂಟ್‌ಗಳಾದ ಕೆಎಸ್‌ಪಿ, ಬಿಟಿಪಿ, ಬೆಂಗಳೂರು ಒನ್, ಕರ್ನಾಟಕ ಒನ್, ಟ್ರಾಫಿಕ್ ಪೊಲೀಸರ ಬಳಿಯೂ ತಮ್ಮ ದಂಡದ ರಿಯಾಯಿತಿ ಮೊತ್ತವನ್ನು ಜನ ಪಾವತಿಸಬಹುದು. ಡಿ.12ರ ಬಳಿಕ ಪೂರ್ಣ ಪ್ರಮಾಣದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಶೇ.50ರಷ್ಟು ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಹೊರಡಿಸುತ್ತಿರುವ 5ನೇ ಬಾರಿಯ ಆದೇಶ ಇದಾಗಿದೆ.

ಇದಕ್ಕೂ ಮುನ್ನ ಆ.23ರಿಂದ ಸೆ.12ರವರೆಗೂ ದಂಡದ ಶೇ.50ರಷ್ಟನ್ನು ಪಾವತಿಸಲು ಅವಕಾಶ ನೀಡಿತ್ತು. ಈ ವೇಳೆ ಬೆಂಗಳೂರು ಒಂದರಲ್ಲೇ 55 ಕೋಟಿ ರೂ.ಗೂ ಹೆಚ್ಚು ದಂಡ ಸಂಗ್ರಹವಾಗಿತ್ತು.ಇದನ್ನೂ ಓದಿ: ಜೆಫ್ರಿ ಎಪ್‌ಸ್ಟೀನ್ ಸೆಕ್ಸ್ ಹಗರಣದ ಫೈಲ್‌ ಬಿಡುಗಡೆಗೆ ಟ್ರಂಪ್‌ ಸಹಿ

Share This Article