ಉದ್ಯೋಗದಲ್ಲಿ ಮಹಿಳೆಯರಿಗೆ 35% ಮೀಸಲಾತಿ: ಮಧ್ಯಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

Public TV
1 Min Read

ಭೋಪಾಲ್‌: ಮಧ್ಯಪ್ರದೇಶ (Madhya Pradesh) ಕ್ಯಾಬಿನೆಟ್‌ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ (Women Employees) ಮೀಸಲಾತಿ (Reservation) ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ.

ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆಯಾಗಿ ಜಾರಿ ಬಂದರೆ ಮಹಿಳಾ ಮೀಸಲಾತಿ ಪ್ರಮಾಣ 35% ಏರಿಕೆಯಾಗಲಿದೆ.

ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ. ಮಧ್ಯಪ್ರದೇಶದಲ್ಲಿ ಸರ್ಕಾರಿ ಸೇವೆಗಳ ಎಲ್ಲಾ ನೇಮಕಾತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು 33% ರಿಂದ 35% ಗೆ ಹೆಚ್ಚಿಸಲಾಗಿದೆ. ಇದು ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಮಧ್ಯಪ್ರದೇಶದ ಡಿಸಿಎಂ ರಾಜೇಂದ್ರ ಶುಕ್ಲಾ ತಿಳಿಸಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ 254 ಹೊಸ ರಸಗೊಬ್ಬರ ಮಾರಾಟ ಕೇಂದ್ರಗಳನ್ನು ತೆರೆಯಲು ಸಂಪುಟ ಅನುಮೋದನೆ ನೀಡಿದೆ. ಈ ನಿರ್ಧಾರ ಜಾರಿಯಿಂದ ರೈತರಿಗೆ ಗೊಬ್ಬರಕ್ಕಾಗಿ ಕಾಯುವುದರಿಂದ ಮುಕ್ತಿ ಸಿಗಲಿದೆ ಎಂದಿದ್ದಾರೆ.

ವೈದ್ಯಕೀಯ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ, ಅಭ್ಯರ್ಥಿಗಳ ವಯಸ್ಸನ್ನು 40 ವರ್ಷದಿಂದ 50 ವರ್ಷಕ್ಕೆ ಹೆಚ್ಚಿಸಲು ಸಚಿವ ಸಂಪುಟವು ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.

Share This Article