Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲ Gmail ಖಾತೆಗಳನ್ನು ಡಿಲೀಟ್ ಮಾಡಲು ಮುಂದಾದ Google!
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Latest

ಕೆಲ Gmail ಖಾತೆಗಳನ್ನು ಡಿಲೀಟ್ ಮಾಡಲು ಮುಂದಾದ Google!

Last updated: May 17, 2023 3:30 pm
By
Share
1 Min Read

ವಾಷಿಂಗ್ಟನ್: ನಿಮ್ಮಲ್ಲಿ ಜಿಮೇಲ್ (Gmail) ಖಾತೆ ಇದ್ದರೂ ಕೂಡಾ ಅದನ್ನು 2 ವರ್ಷಗಳಿಂದ ಬಳಸಿಯೇ ಇಲ್ಲ ಎಂದಾದರೆ ನಿಮ್ಮ ಖಾತೆಗೆ ಇದೀಗ ಕುತ್ತು ಬರುವ ಸಾಧ್ಯತೆಯಿದೆ.

ಗೂಗಲ್ (Google) ತನ್ನ ಬಳಕೆದಾರರ ನಿಷ್ಕ್ರಿಯ ಖಾತೆಗಳ ನೀತಿಯಲ್ಲಿ ಹೊಸ ಬದಲಾವಣೆ ತಂದಿದೆ. ಬಳಕೆದಾರರು ತನ್ನ ಹಳೆಯ ಗೂಗಲ್ ಖಾತೆಗಳನ್ನು (Google Account) ಲಾಗ್‌ಇನ್ ಮಾಡಲು ಹಾಗೂ ಪರಿಶೀಲಿಸಲು ಹೇಳಿದೆ. ಈ ಹಿಂದೆ 2 ವರ್ಷಗಳಿಂದ ಕಾರ್ಯನಿರ್ವಹಿಸದ ಖಾತೆಗಳಲ್ಲಿ ಸಂಗ್ರಹವಾಗಿರುವ ಡೇಟಾಗಳನ್ನು ಅಳಿಸಿ ಹಾಕುವುದಾಗಿ ಗೂಗಲ್ ಹೇಳಿತ್ತು. ಆದರೀಗ ಇಡೀ ಖಾತೆಯನ್ನೇ ಅಳಿಸಿ ಹಾಕುವುದಾಗಿ ಗೂಗಲ್ ಎಚ್ಚರಿಸಿದೆ.

ಈ ವರ್ಷದ ನಂತರ ಗೂಗಲ್ ಖಾತೆಯನ್ನು ಕನಿಷ್ಠ 2 ವರ್ಷಗಳವರೆಗೆ ಬಳಸದಿದ್ದರೆ ಅಥವಾ ಸೈನ್ ಇನ್ ಮಾಡದಿದ್ದರೆ ನಾವು ಖಾತೆಯನ್ನು ಹಾಗೂ ಅದರಲ್ಲಿರುವ ಡೇಟಾಗಳನ್ನು ಅಳಿಸಬಹುದು. ಅವುಗಳಲ್ಲಿ ಗೂಗಲ್ ವರ್ಕ್‌ಸ್ಪೇಸ್ (ಜಿಮೇಲ್, ಡಾಕ್ಸ್, ಡ್ರೈವ್, ಕ್ಯಾಲೆಂಡರ್), ಯೂಟ್ಯೂಬ್, ಹಾಗೂ ಗೂಗಲ್ ಫೋಟೋಸ್ ಸೇರಿರುತ್ತವೆ ಎಂದು ಗೂಗಲ್ ತನ್ನ ಬ್ಲಾಗ್ ಪೋಸ್ಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: Layoff: 11 ಸಾವಿರ ಜಾಬ್ ಕಟ್‌ಗೆ ವೊಡಾಫೋನ್ ಪ್ಲ್ಯಾನ್

ಈ ಹೊಸ ನೀತಿಯ ಬಗ್ಗೆ ಬಳಕೆದಾರರು ಈ ವರ್ಷದ ಡಿಸೆಂಬರ್ ವರೆಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಜಿಮೇಲ್‌ನಲ್ಲಿ ಸಕ್ರಿಯವಾಗಿಲ್ಲದ ಬಳಕೆದಾರರು ತಮ್ಮ ಹಳೆಯ ಖಾತೆಯನ್ನು ಹಿಂಪಡೆಯಲು ಇನ್ನೂ ಸಮಯವಿದೆ. ಆದರೆ ಒಂದು ಬಾರಿ ಡಿಲೀಟ್ ಆದ ಖಾತೆಯನ್ನು ಮರುಬಳಕೆ ಮಾಡಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ.

More Read

RSS ಇಂದಿರಾ ಗಾಂಧಿಗೆ ಹೆದರಿಲ್ಲ, ನೆಹರೂ ಮುಂದೆ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?- ಸುನಿಲ್ ಕುಮಾರ್
ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ
ಮಲ್ಲಿಕಾರ್ಜುನ ಖರ್ಗೆಯವರೇ ನಿಮ್ಮ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಡಿ: ಗೋವಿಂದ ಕಾರಜೋಳ
ʻಕೊರಗಜ್ಜʼ ಫಸ್ಟ್ ಲುಕ್ ಟೀಸರ್ ಔಟ್ – 6 ಭಾಷೆಗಳಲ್ಲಿ ತಯಾರಾದ ಸಿನಿಮಾ

ಬಳಕೆದಾರರು ಈ ನೀತಿಯ ಬದಲಾವಣೆ ಬಗ್ಗೆ ತಿಳಿದುಕೊಂಡಿರುವುದು ಹಾಗೂ ತಮ್ಮ ನಿಷ್ಕ್ರಿಯ ಗೂಗಲ್ ಖಾತೆಗಳನ್ನು ಅಳಿಸದಂತೆ ತಡೆಯಲು ಕ್ರಮ ಕೈಗೊಳ್ಳುವುದು ಅತ್ಯಗತ್ಯ. ಇದಕ್ಕಾಗಿ ಬಳಕೆದಾರರು ತಮ್ಮ ಹಳೆಯ ಖಾತೆಗಳನ್ನು ಪರಿಶೀಲಿಸುವುದು ಹಾಗೂ ವಿವಿಧ ಚಟುವಟಿಕೆಯನ್ನು ನಿರ್ವಹಿಸುವುದರಿಂದ ಖಾತೆಗಳನ್ನು ಅಳಿಸದಂತೆ ತಪ್ಪಿಸಬಹುದು. ಇದನ್ನೂ ಓದಿ: ಮೊಬೈಲ್ ಫೋನ್ ಕಳೆದು ಹೋದ್ರೆ ಇನ್ನು ಚಿಂತಿಸಬೇಕಿಲ್ಲ – ಶೀಘ್ರವೇ ಕೇಂದ್ರ ತರಲಿದೆ ಟ್ರ್ಯಾಕಿಂಗ್ ಸಿಸ್ಟಮ್

Share This Article
Facebook Whatsapp Whatsapp Telegram
Previous Article ’ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಕನ್ನಡ ಫಸ್ಟ್ ಲುಕ್ ಗೆ ಶಿವಣ್ಣ ವಾಯ್ಸ್
Next Article ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಆಯ್ಕೆ – ಗ್ಯಾರಂಟಿ ಘೋಷಣೆ ಕೂಗಿ ಸಂಭ್ರಮಿಸಿದ ಅಭಿಮಾನಿಗಳು

Popular News

ಕಾಂತಾರ ಚಾಪ್ಟರ್-1 ಗಲ್ಲಾಪೆಟ್ಟಿಗೆಯಲ್ಲಿ ಹೊಸ ದಾಖಲೆ – 11 ದಿನಕ್ಕೆ ಗಳಿಸಿದ್ದೆಷ್ಟು ಕೋಟಿ?
ದೊಡ್ಡಗೌಡ್ರ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಯಿಂದ ಡಿಸ್ಚಾರ್ಜ್