ಸಮಾಜವಾದಿ ಪಕ್ಷ ಆಡಳಿತದಲ್ಲಿದ್ದಾಗ ಗೂಂಡಾಗಿರಿ ನಡೆಯುತ್ತಿತ್ತು: ಅಮಿತ್ ಶಾ

Public TV
1 Min Read

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಾಪನೆಯಾದರೆ ಸಮಾಜವಾದಿ ಪಕ್ಷದ ಆಡಳಿತದಲ್ಲಿದ್ದಾಗ ಮಾಫಿಯಾ ಮತ್ತು ಗುಂಡಾಗಿರಿಗೆ ಉತ್ತೇಜನ ನೀಡಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಮಾಜವಾದಿ ಪಕ್ಷದ (ಎಸ್‍ಪಿ) ವಿರುದ್ಧ ವಾಗ್ದಾಳಿ ನಡೆಸಿದರು.

ಶುಕ್ರವಾರ ಉತ್ತರ ಪ್ರದೇಶದ ಬರೇಲಿಯಲ್ಲಿ ರೋಡ್ ಶೋ ವೇಳೆ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ಆಡಳಿತದ ಅವಧಿಯಲ್ಲಿ ಇಡೀ ಉತ್ತರಪ್ರದೇಶ ಗೂಂಡಾಗಳು ಮತ್ತು ಮಾಫಿಯಾಗಳಿಂದ ಭಯಪಡುತ್ತಿತ್ತು. ಆದರೆ ಈಗ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಗುಂಡಾಗಿರಿಯನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸ್ಥಾಪಿಸಿದೆ ಎಂದು ಹೇಳಿದರು. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

ಯೋಗಿ ಅವರು ಮಂದಿರವನ್ನು ನಿರ್ಮಿಸುತ್ತೇವೆ ಆದರೆ ದಿನಾಂಕವನ್ನು ಹೇಳುವುದಿಲ್ಲ ಎನ್ನುತ್ತಿದ್ದರು. ಅದರಂತೆ ಇದೀಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿರುವುದನ್ನು ಕಾಣಬಹುದಾಗಿದೆ ಎಂದು ತಿಳಿಸಿದರು. ಜನರು 300ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿಗೆ ನೀಡುವ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ಅವರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಹೊಸ ವರ್ಷದಂದೇ ದುರಂತ – ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದ 12 ಮಂದಿ ದುರ್ಮರಣ

Share This Article
Leave a Comment

Leave a Reply

Your email address will not be published. Required fields are marked *