ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ

1 Min Read

ರಾಯಚೂರು: ರೈತನಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆ ಲಿಂಗಸುಗೂರು (Lingasugu) ತಾಲೂಕಿನ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓಗೆ (PDO) ರಾಯಚೂರು ಜಿಲ್ಲಾ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

2017 ರಲ್ಲಿ ಲಿಂಗಸುಗೂರು ತಾಲೂಕಿನ ಗೊರೇಬಾಳ ತಾಂಡಾದ ಚೇತನ ಎಂಬವರಿಂದ ಗೋರೆಬಾಳ ಗ್ರಾಮ ಪಂಚಾಯತಿ ಪಿಡಿಓ ಮಹ್ಮದ ಖಾಜಾ ಸಹಾಯ ಧನದ ಶೇಡ್‌ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ 15 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ. ಈ ವೇಳೆ ಎಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ದೋಷಾರೋಪಣ ಪಟ್ಟಿಯಲ್ಲಿನ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ವಿಧಿಸಿ ಕೋರ್ಟ್‌ ತೀರ್ಪು ನೀಡಿದೆ.‌ ಇದನ್ನೂ ಓದಿ: ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

ಪ್ರಕರಣದಲ್ಲಿ ಪಿರ್ಯಾದಿದಾರನಾದ ಚೇತನ್ ನ್ಯಾಯಾಲಯದಲ್ಲಿ ಪ್ರತಿಕೂಲ ಸಾಕ್ಷಿ ನೀಡಿದ್ದು, ಸರ್ಕಾರಿ ಅಭಿಯೋಜಕರು ಪಿರ್ಯಾದಿಯ ಮೇಲೆ ಪ್ರತಿಕೂಲ ಸಾಕ್ಷಿ ನೀಡಿದ್ದಕ್ಕಾಗಿ ಕ್ರಮ ಕೈಕೊಳ್ಳುವಂತೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಅರ್ಜಿಯನ್ನು ಪರಿಗಣಿಸಿ ನ್ಯಾಯಾಲಯದ ಶಿರಸ್ತೇದಾರರಿಗೆ ಪಿರ್ಯಾದುದಾರನಾದ ಚೇತನ ಮೇಲೆ ನ್ಯಾಯಾಲಯಕ್ಕೆ ಸುಳ್ಳು ಸಾಕ್ಷಿ ನೀಡಿದ್ದಕ್ಕಾಗಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಹ ಆದೇಶ ನೀಡಲಾಗಿದೆ. ಇದನ್ನೂ ಓದಿ: ವಿನಯ್‌ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು?

Share This Article