ನಿಂತಿದ್ದ ಬೈಕಿಗೆ ಸಾರಿಗೆ ಬಸ್ ಡಿಕ್ಕಿ – ಮೂರು ಬೈಕ್‍ಗಳು ಜಖಂ

Public TV
0 Min Read

ಧಾರವಾಡ: ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯದಿಂದ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಬೈಕ್‍ ಗಳು ಜಖಂ ಆದ ಘಟನೆ ಜಿಲ್ಲೆಯ ಸವದತ್ತಿ ರಸ್ತೆಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಬೈಕ್‍ ಗಳನ್ನು ನಿಲ್ಲಿಸಲಾಗಿತ್ತು. ಆ ವೇಳೆ ವೇಗವಾಗಿ ಬಂದ ಸಾರಿಗೆ ಬಸ್, ಏಕಾಏಕಿ ನಿಂತಿದ್ದ ಬೈಕ್‍ ಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೈಕ್ ಗಳು ಜಖಂ ಆಗಿವೆ. ಸದ್ಯ ಈ ಘಟನೆಯಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಈ ಘಟನೆ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *