ಸರ್ಕಾರಿ ಕಾಲೇಜಿಗೆ ಉಚಿತವಾಗಿ 30 ಕಂಪ್ಯೂಟರ್ ವಿತರಿಸಿದ ರೋಟರಿ ಕ್ಲಬ್

Public TV
1 Min Read

ಬೀದರ್: ಕಾಂಗ್ನಿಜೆಂಟ್ ತಂತ್ರಜ್ಞಾನವು ಉಚಿತವಾಗಿ ನೀಡಿರುವ 30 ಕಂಪ್ಯೂಟರ್‌ಗಳನ್ನು ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವಿತರಿಸಿತು.

ಕಾಲೇಜಿನ ಗಣಿತಶಾಸ್ತ್ರ ಪ್ರಯೋಗಾಲಯ ಹಾಗೂ ಗಣಕ ವಿಜ್ಞಾನ ಪ್ರಯೋಗಾಲಯದಲ್ಲಿ ಅಳವಡಿಸಿದ ಕಂಪ್ಯೂಟರ್‍ಗಳ ಸೇವೆಗೆ ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಗರ್ವನರ್ ತಿರುಪತಿ ನಾಯ್ಡು ಚಾಲನೆ ನೀಡಿದರು. ಕಾಂಗ್ನಿಜೆಂಟ್ ತಂತ್ರಜ್ಞಾನ ಸಂಸ್ಥೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ವಿತರಿಸಲು ರಾಜ್ಯ ಸರ್ಕಾರಕ್ಕೆ ಉಚಿತವಾಗಿ ಕಂಪ್ಯೂಟರ್‌ಗಳನ್ನು ಕೊಟ್ಟಿದೆ. ಸರ್ಕಾರ ಕಂಪ್ಯೂಟರ್‌ಗಳ ಸಾಗಣೆ ಹಾಗೂ ಅನುಷ್ಠಾನದ ಹೊಣೆಯನ್ನು ರೋಟರಿ ಸಂಸ್ಥೆಗೆ ವಹಿಸಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಎಸಿಬಿ ಅಧಿಕಾರಿಗಳ ಭರ್ಜರಿ ರಣಬೇಟೆ – 503 ಅಧಿಕಾರಿಗಳು 68 ಕಡೆ ದಾಳಿ..! 

ಉಚಿತ ಕಂಪ್ಯೂಟರ್ ವಿತರಣೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ರೋಟರಿ ಸಂಸ್ಥೆಯು ಸಾಮಾಜಿಕ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಂಡಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದೆ. ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದರು.

ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಸಹಾಯಕ ಗವರ್ನರ್ ಶಿವಕುಮಾರ್ ಯಲಾಲ್ ಮಾತನಾಡಿ, ಬೀದರ್‌ನಲ್ಲಿ ಇನ್ನಷ್ಟು ರೋಟರಿ ಕ್ಲಬ್‍ಗಳನ್ನು ರಚಿಸುವ ಉದ್ದೇಶ ಇದೆ. ಹೊಸ ತಾಲೂಕು ಚಿಟಗುಪ್ಪದಲ್ಲೂ ಕ್ಲಬ್ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ತಾನು ನೆಟ್ಟ ಗಿಡದಲ್ಲಿ ಹಣ್ಣು ಕೀಳಲು ಮುಂದಾದ ಅತ್ತೆಯತ್ತ ಚಾಕು ಬಿಸಿದ ಸೋಸೆ

Share This Article
Leave a Comment

Leave a Reply

Your email address will not be published. Required fields are marked *