ಬೀದರ್: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್ ನೀಡಿದ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.
ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ತಂದೆ ಅಶೋಕ ಕುಮಾರ್ ಅವರನ್ನು ಕೆಲಸದಿಂದ ತಾಲೂಕು ಆಡಳಿತ ಬಿಡುಗಡೆಗೊಳಿಸಿದೆ. ಇದನ್ನೂ ಓದಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿ ಅಮಾನತುಗೊಂಡಿರುವ ಪಿಡಿಒಗೆ ಮತ್ತೊಂದು ಸಂಕಷ್ಟ
ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಸಿಬ್ಬಂದಿ ಪ್ರಮೋದ್ ಭಾಗಿಯಾಗಿದ್ದು ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗಬಾರದೆಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದೆ.
ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಸುಮಾರು 20ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ನಡೆದ ಪಥಸಂಚಲನದಲ್ಲಿಹಲವು ಸರ್ಕಾರಿ ಸಿಬ್ಬಂದಿ, ಅಧಿಕಾರಿಗಳು ಭಾಗಿಯಾಗಿದ್ದಾರೆ.