RSS ಸಾಧನದಂತೆ ರಾಜ್ಯಪಾಲರು ಕಾರ್ಯ ನಿರ್ವಹಿಸ್ತಿದ್ದಾರೆ: ಪಿಣರಾಯಿ ವಾಗ್ದಾಳಿ

Public TV
1 Min Read

ತಿರುವನಂತಪುರಂ: ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammad Khan) RSS ಸಾಧನದಂತೆ ಕೆಲಸ ಮಾಡುತ್ತಿದ್ದು, ಅವರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಆರೋಪಿಸಿದ್ದಾರೆ. ರಾಜ್ಯದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ರಾಜೀನಾಮೆಯನ್ನು ಸಲ್ಲಿಸುವಂತೆ ಸೂಚಿಸಿದ ಹಿನ್ನೆಲೆ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಪಾಲರು (Governor) ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕು, ರಾಜ್ಯ ಸರ್ಕಾರದ ವಿರುದ್ಧ ಸಂಚು ರೂಪಿಸುವುದಲ್ಲ, ರಾಜ್ಯಪಾಲರ ಸೂಚನೆ ಪ್ರಜಾಪ್ರಭುತ್ವ ವಿರೋಧಿ ಮತ್ತು ವಿಸಿಗಳ ಅಧಿಕಾರದ ಮೇಲಿನ ಅತಿಕ್ರಮಣವಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಮಹಾರಾಷ್ಟ್ರದ ರಾಜಕೀಯದಲ್ಲಿ ಮತ್ತೆ ಬಿರುಗಾಳಿ – ಬಿಜೆಪಿ ಸೇರಲಿದ್ದಾರಾ ಶಿಂಧೆ ಬಣದ 22 ಶಾಸಕರು?

ಕೇರಳ ವಿಶ್ವವಿದ್ಯಾನಿಲಯ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸೂಚನೆ ನೀಡಿದ್ದರು.

ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ (ಕೆಟಿಯು) ಉಪಕುಲಪತಿಯಾಗಿ ಡಾ.ರಾಜಶ್ರೀ ಎಂಎಸ್ ಅವರ ನೇಮಕವನ್ನು ಸುಪ್ರೀಂ ಕೋರ್ಟ್ ಈ ಹಿಂದೆ ರದ್ದುಗೊಳಿಸಿದೆ. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (Uಉಅ) ಪ್ರಕಾರ, ಶೋಧನಾ ಸಮಿತಿಯು ವಿಸಿ ಹುದ್ದೆಗೆ ಮೂರಕ್ಕಿಂತ ಕಡಿಮೆ ಅರ್ಹ ವ್ಯಕ್ತಿಗಳ ಸಮಿತಿಯನ್ನು ಶಿಫಾರಸು ಮಾಡಬೇಕಾಗಿತ್ತು ಆದರೆ ರಾಜಶ್ರೀ ಅವರ ಪ್ರಕರಣದಲ್ಲಿ ಅವರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *