ಸಿದ್ದು ಪ್ರಮಾಣವಚನ ವೇಳೆ ವೇದಿಕೆಯಲ್ಲಿ ಕ್ರಿಮಿನಲ್‌ ಹಿನ್ನಲೆಯುಳ್ಳ ವ್ಯಕ್ತಿ – ತನಿಖೆಗೆ ರಾಜ್ಯಪಾಲರ ಪತ್ರ

Public TV
1 Min Read

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದ ಕಾರ್ಯಕ್ರಮದಲ್ಲಿ ಕ್ರಿಮಿನಲ್‌ ಹಿನ್ನಲೆಯುಳ್ಳು ವ್ಯಕ್ತಿ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ದೊಡ್ಡ ಭದ್ರತಾ ಲೋಪ ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದು ಸೂಚಿಸಿದ್ದಾರೆ. ಇದನ್ನೂ ಓದಿ: ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು – ತಪ್ಪಾಯ್ತು ಬಿಟ್ಬಿಡಿ ಅಣ್ಣಾ ಎಂದು ಸಾರ್ವಜನಿಕರಲ್ಲಿ ಕ್ಷಮೆ

ಸಿದ್ದು ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿ.ಎಸ್.ಶಿವಣ್ಣ (B.S.Shivanna) ಎಂಬ ವ್ಯಕ್ತಿ ಕ್ರಿಮಿನಲ್‌ ಹಿನ್ನಲೆ ಉಳ್ಳವರಾಗಿದ್ದಾರೆ. ಇಂತಹವರು ಸಿಎಂ ಪದಗ್ರಹಣ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಭದ್ರತಾ ಲೋಪ ಮತ್ತು ಕಾನೂನು ಉಲ್ಲಂಘನೆ ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಹೆಚ್.ವಿಶ್ವನಾಥ್‌ (H.Vishwanath) ಪತ್ರ ಬರೆದಿದ್ದರು.

ಎಚ್.ವಿಶ್ವನಾಥ್ ಪತ್ರದ ಆಧಾರ ಮೇಲೆ ಸಿಎಸ್‌ಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ (Thawarchand Gehlot) ಅವರು, ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಟಿಕೆಟ್.. ಟಿಕೆಟ್.. ಟಿಕೆಟ್.. – ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!

Share This Article