ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು

Public TV
1 Min Read

ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದ್ದಾರೆ. ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾದ ನಂತರ ಇದೇ ಮೊದಲ ಬಾರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ – ಇಂದು ಪಿಎಂ ಉದ್ಘಾಟನೆ

ರಾಜ್ಯಪಾಲರು ದೇವಸ್ಥಾನಕ್ಕೆ ಭೇಟಿ ನೀಡಿದಾಗ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ಅವರನ್ನು ಸ್ವಾಗತಿಸಿದ್ದಾರೆ. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರ ನೀಡಿ ರಾಜ್ಯಪಾಲರನ್ನು ಗೌರವಿಸಿದ್ದಾರೆ. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ಗೌರವಾನ್ವಿತ ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಿದ್ದಾರೆ. ಇದನ್ನೂ ಓದಿ: ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ

ಈ ಸಂದರ್ಭದಲ್ಲಿ ತಿರುಪತಿ ಜಿಲ್ಲೆಯ ಬಿಜೆಪಿ ಮುಖಂಡ ಭಾನುಪ್ರಕಾಶ್ ರೆಡ್ಡಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *