ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ – ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಗೆಹ್ಲೋಟ್

By
1 Min Read

ಬೆಂಗಳೂರು: ವೈಟ್ ಫೀಲ್ಡ್ ಬಳಿಯ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದಲ್ಲಿ (Rameshwaram Cafe Blast) ಗಾಯಗೊಂಡವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಭೇಟಿಯಾಗಿ, ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದ್ದಾರೆ.

ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಅವರು ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಈ ವೇಳೆ ರಾಜ್ಯಪಾಲರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಹ ಇದ್ದರು. ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ – ಗಾಯಗೊಂಡವರ ಪೂರ್ಣ ವಿವರ ಓದಿ

ಘಟನೆಯ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಬಾಂಬ್ ಇಟ್ಟ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕಲು ಶುರು ಮಾಡಿದ್ದಾರೆ. ಆರೋಪಿ ಬಸ್‍ನಲ್ಲಿ ಬಂದು, ಹೋಟೆಲ್‍ನಲ್ಲಿ ರವೆ ಇಡ್ಲಿ ತಿಂದು ಆಮೇಲೆ ಬಾಂಬ್ ಇಟ್ಟು ಹೋಗಿದ್ದಾನೆ. ಬರುವಾ ಮಾಸ್ಕ್ ಧರಿಸಿ ಬಂದಿದ್ದಾನೆ. ಅಲ್ಲದೇ ಆರೋಪಿಗೆ ಸುಮಾರು 35 ವರ್ಷ ವಯಸ್ಸಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದರು.

ಹೋಟೆಲ್‍ನಲ್ಲಿ ಬ್ಯಾಗ್ ಇಟ್ಟು ಹೋದ 1 ಗಂಟೆ ಬಳಿಕ ಬಾಂಬ್ ಬ್ಲಾಸ್ಟ್ ಆಗಿದೆ. ಘಟನಾ ಸ್ಥಳದಲ್ಲಿ ಟೈಮರ್ ಸಹ ಪತ್ತೆಯಾಗಿದೆ. ವ್ಯಕ್ತಿಯ ಎಲ್ಲಾ ಚಟುವಟಿಕೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶೀಘ್ರದಲ್ಲೇ ಸಿಕ್ಕಿಬಿಳುತ್ತಾನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಐದನೇ ಬಾರಿಗೆ ಬೆಂಗಳೂರಿನಲ್ಲಿ ಬಾಂಬ್‌ ಸ್ಟೋಟ: ಹಿಂದೆ ಎಲ್ಲೆಲ್ಲಿ ಸಂಭವಿಸಿತ್ತು?

Share This Article