ಕೊರೊನಾ ಹರಡಿದ್ದು, ಟ್ರಾಫಿಕ್ ಜಾಮ್ ಮಾಡಿದ್ದು ಪಾದಯಾತ್ರೆ ಸಾಧನೆ: ಕಾರಜೋಳ ವ್ಯಂಗ್ಯ

Public TV
1 Min Read

ಬೆಂಗಳೂರು: ಕೊರೊನಾ ಹರಡಿದ್ದು, ಟ್ರಾಫಿಕ್ ಜಾಮ್ ಮಾಡಿದ್ದು ಪಾದಯಾತ್ರೆ ಮಾಡಿದ ಸಾಧನೆ ಎಂದು ಕಾಂಗ್ರೆಸ್ ಪಕ್ಷದ ಮೇಕೆದಾಟು ಯೋಜನೆ ವಿರುದ್ಧ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಿಡಿಕಾಡಿದರು.

ಕಾಂಗ್ರೆಸ್ ಪಕ್ಷದವರು ಮೇಕೆದಾಟು ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯೋಜನೆಯ ಹೆಸರಿನಲ್ಲಿ ನಡೆಸಿದ ಪಾದಯಾತ್ರೆ ಕೇವಲ ಪ್ರಚಾರ ಯಾತ್ರೆ. ಅದೊಂದು ಜನರನ್ನು ಮೋಸಗೊಳಿಸುವ ವಿಫಲ ತಂತ್ರ. ಕಾಂಗ್ರೆಸ್ ಅವರ ಮೊದಲ ಹಂತದ ಪಾದಯಾತ್ರೆ ಕೇವಲ ಕೊರೊನಾ ಸೋಂಕು ಹರಡುವಿಕೆಯಲ್ಲಿ ಯಶಸ್ವಿಯಾದರೆ, ಎರಡನೇ ಹಂತದ ಪಾದಯಾತ್ರೆ ಬೆಂಗಳೂರು ನಗರದಾದ್ಯಂತ ಮತ್ತು ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿಗೆ ಮಾತ್ರ ಸಾಕ್ಷಿಯಾಯಿತು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

ಮೇಕೆದಾಟು ಯೋಜನೆ ಸಂಕಲ್ಪದಿಂದ ಸಾಕಾರಗೊಳ್ಳಬೇಕಾದರೆ ಹಾಗೂ ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಆಗುವುದು ಕೇವಲ ಭಾರತೀಯ ಜನತಾ ಪಕ್ಷ ಮತ್ತು ಅದರ ಸರ್ಕಾರದಿಂದ ಮಾತ್ರ ಸಾಧ್ಯ. ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ಕಾವೇರಿ ಕೊಳ್ಳದ ಜನತೆಗೆ ಈ ವಿಷಯದ ಸತ್ಯ ದರ್ಶನವಾಗಿದೆ ಎಂದು ವಿವರಿಸಿದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಯಾವುದೇ ಪರಿಣಾಮಕಾರಿ ಕ್ರಮಕ್ಕೆ ಮುಂದಾಗದೇ ಕಾಲಹರಣ ಮಾಡಿತ್ತು. ಇದೀಗ ಮತ್ತೆ ಮತ್ತೆ ಪಾದಯಾತ್ರೆ ಮಾಡುವ ಮೂಲಕ ಜನದ್ರೋಹ ಎಸಗುತ್ತಿದೆ. ಕಾಂಗ್ರೆಸಿಗರ ಗಿಮಿಕ್ ಗೆ ನಾಡಿನ ಜನತೆ ಮೋಸ ಹೋಗುವುದಿಲ್ಲ ಎಂಬ ಸತ್ಯದ ಅರಿವು ಕಾಂಗ್ರೆಸ್ ಸಾಕ್ಷಾತ್ಕಾರವಾಗಬೇಕಿದೆ ಎಂದು ಕುಟುಕಿದರು. ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೈಭವಕ್ಕೆ ಇಂದು ಚಾಲನೆ

Share This Article
Leave a Comment

Leave a Reply

Your email address will not be published. Required fields are marked *