ಕೊರೊನಾ ನಿಯಮ ಉಲ್ಲಂಘಿಸಿ ಹೋರಾಟ ಮಾಡ್ಬೇಡಿ – ಕಾಂಗ್ರೆಸ್‍ಗೆ ಕಾರಜೋಳ ಮನವಿ

Public TV
1 Min Read

ಬೆಂಗಳೂರು: ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡುತ್ತೇನೆ. ಕೋವಿಡ್ ಹೆಚ್ಚಳವಾಗುತ್ತಿರುವ ಸಮಯದಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ ಹೋರಾಟ ಮಾಡಬೇಡಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆಗೆ ನಮ್ಮ ವಿರೋಧವಿಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ ಸಮಯ ಸಂದರ್ಭ ನೋಡಿಕೊಂಡು ಹೋರಾಟ ಮಾಡಬೇಕಾಗುತ್ತದೆ. 25 ಸಾವಿರ ಜನರನ್ನು ಕರೆದು ಹೋರಾಟ ಮಾಡುತ್ತೇವೆ ಅಂತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ. ಈ ಬಗ್ಗೆ ಕಾಂಗ್ರೆಸ್ ಸ್ವಲ್ಪ ಆಲೋಚನೆ ಮಾಡಬೇಕು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಯಾವುದೇ ಕೆಲಸ ಮಾಡಲಿಲ್ಲ. ಅವರು ಯೋಜನೆ ಅನುಷ್ಠಾನ ತರುವುದಕ್ಕೆ ಯಾವ ಕೆಲಸ ಮಾಡಲಿಲ್ಲ. ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ಮಾಡಿದ್ದಾರೆ. ಈಗ ಅಧಿಕಾರದಲ್ಲಿಲ್ಲ, ಹೋರಾಟ ಮಾಡುತ್ತಿದ್ದಾರೆ. ಚುನಾವಣಾ ಸಂದರ್ಭದಲ್ಲಿ ವೋಟ್ ಬ್ಯಾಂಕ್‍ಗಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್

 

ನಾವು ಏನ್ ಮಾಡಿಲ್ಲ ಅಂತ ಹೇಳುವುದು ಸರಿಯಲ್ಲ. ನಾವು ಲೀಗಲ್ ಟೀಂ ಜೊತೆ ಸಂಪರ್ಕದಲ್ಲಿದ್ದು, ಕಾನೂನು ಹೋರಾಟ ಮಾಡುತ್ತಿದ್ದೇವೆ. ಕೇಂದ್ರ ಜಲಶಕ್ತಿ ಮಂತ್ರಿ ಜೊತೆ ಚರ್ಚೆ ಮಾಡಿ ಕ್ಲಿಯರ್ ಮಾಡಿಸಲು ಪ್ರಯತ್ನ ಮಾಡುತ್ತಿದ್ದೇವೆ. ಪರಿಸರ ಇಲಾಖೆ ಕ್ಲಿಯರೆನ್ಸ್‌ಗೂ ಸಹ ಪ್ರಯತ್ನ ಪಡುತ್ತಿದ್ದೇವೆ. ತಮಿಳುನಾಡು ಸರ್ಕಾರ ಸಹ ಸುಪ್ರೀಂ ಕೋರ್ಟ್‍ಗೆ ಹೋಗಿದೆ. ನಾವು ಸುಪ್ರೀಂ ಕೋರ್ಟ್‍ನಲ್ಲಿ ಸಮರ್ಥವಾಗಿ ಎದರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭೂಮಿಯ ಸಮೀಪದಿಂದ ಹಾದುಹೋಗಲಿದೆ ಪರಮಾಣು ಬಾಂಬ್‌ಗಿಂತ 30 ಪಟ್ಟು ಹೆಚ್ಚು ಶಕ್ತಿಯ ಕ್ಷುದ್ರಗ್ರಹ

ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರ ಕುರಿತಂತೆ ಮಾತನಾಡಿದ ಅವರು, ಜನರು ಸಹಕರಿಸಬೇಕಿದೆ. ಇಡೀ ವಿಶ್ವದಲ್ಲಿ ಕೋವಿಡ್‍ನಿಂದ ಸಾವು, ನೋವು ಸಂಭವಿಸಿದೆ. ರಾಜ್ಯದಲ್ಲಿಯೂ ಸಮಸ್ಯೆಯಾಗಿತ್ತು. ಮತ್ತೆ ಆ ಸಮಸ್ಯೆ ಆಗಬಾರದೆಂದು ಮುನ್ನೆಚ್ಚರಿಕೆ ಕ್ರಮವಾಗಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ನಾವು ತಗೆದುಕೊಂಡಿದ್ದೇವೆ. ಜನರನ್ನು ರಕ್ಷಿಸುವುದು, ಕೋವಿಡ್ ನಿಯಂತ್ರಣ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *