ನವದೆಹಲಿ: ಮುಸ್ಲಿಮರನ್ನು ಕಾಲಾಳುಗಳನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದ ಬಿರ್‌ಭೂಮ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿರ್‌ಭೂಮ್‌ನಲ್ಲಿ ಏನೇ ನಡೆದರೂ ಸರ್ಕಾರ ಮುಸ್ಲಿಮರನ್ನು ತಮ್ಮ ಕಾಲಾಳುಗಳಾಗಿ ಬಳಸಿಕೊಳ್ಳುತ್ತಿದೆ ಎಂಬುದನ್ನು ತೋರಿಸುತ್ತದೆ. ಒಂದೇ ರಾಜಕೀಯ ಪಕ್ಷದ ಎರಡು ಗುಂಪುಗಳು ಹಿಂಸಾಚಾರವನ್ನು ಸೃಷ್ಟಿಸುತ್ತಿವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ
ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ನಲ್ಲಿ ಮಕ್ಕಳು ಸೇರಿದಂತೆ ಹಲವಾರು ಜನರು ಕೊಲ್ಲಲ್ಪಟ್ಟಿರುವುದು ಖಂಡನೀಯ. ಬಂಗಾಳದಲ್ಲಿ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್ ಎಂಬಲ್ಲಿ ಮಂಗಳವಾರ ನಸುಕಿನಲ್ಲಿ ಮನೆಗಳಿಗೆ ಬೆಂಕಿಹತ್ತಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಘಟನೆ ಸಂಬಂಧ 11 ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಬಿರ್ಭೂಮ್ ಹತ್ಯಾ ಪ್ರಕರಣ – ನವದಂಪತಿ ಸಾವು
ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿರೋಧ ವ್ಯಕ್ತವಾಗುತ್ತಿದ್ದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಘಟನೆಗೆ ಕಾರಣ ಎನ್ನಲಾದ ಟಿಎಂಸಿ ನಾಯಕನನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.