ಸುಂಕ ಸಮರದ ಬೆನ್ನಲ್ಲೇ ಮೋದಿಗೆ ಕರೆ ಮಾಡಿದ ಝೆಲೆನ್ಸ್ಕಿ

Public TV
4 Min Read

ನವದೆಹಲಿ: ಅಮೆರಿಕ (USA) ವಿಧಿಸಿದ ಸುಂಕ ಸಮರದ ಬೆನ್ನಲ್ಲೇ ಉಕ್ರೇನ್ (Ukraine) ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Zelenskyy) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ಮಾತುಕತೆ ವೇಳೆ ಮೋದಿ, ಸಂಘರ್ಷವನ್ನು ಶಾಂತಿಯುತ ಇತ್ಯರ್ಥ ಮಾಡುವ ಬಗ್ಗೆ ಮತ್ತು ಶಾಂತಿಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಗುರಿಯನ್ನು ಹೊಂದಿರುವ ಪ್ರಯತ್ನಗಳಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂಬಂಧ ಭಾರತವು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವ ಬದ್ಧತೆಯನ್ನು ಪ್ರಧಾನಿ ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಿಂದ ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌ ಸೇನಾ ಮುಖ್ಯಸ್ಥ

ಭಾರತ-ಉಕ್ರೇನ್ ದ್ವಿಪಕ್ಷೀಯ ಪಾಲುದಾರಿಕೆಯಲ್ಲಿನ ಪ್ರಗತಿಯನ್ನು ನಾಯಕರು ಪರಿಶೀಲಿಸಿದರು, ಪರಸ್ಪರ ಆಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ.

ಎಕ್ಸ್‌ನಲ್ಲಿ ಝೆಲೆನ್ಸ್ಕಿ ಪೋಸ್ಟ್‌ ಮಾಡಿ, ನಾನು ಮೋದಿ ಅವರೊಂದಿಗೆ ನಾನು ದೀರ್ಘ ಸಂಭಾಷಣೆ ನಡೆಸಿದೆ. ನಮ್ಮ ದ್ವಿಪಕ್ಷೀಯ ಸಹಕಾರ ಸೇರಿದಂತೆ ಹಲವು ವಿಷಯಗಳನ್ನು ನಾವು ವಿವರವಾಗಿ ಚರ್ಚಿಸಿದ್ದೇವೆ. ನಮ್ಮ ಜನರಿಗೆ ಬೆಂಬಲ ನೀಡಿದ ಪ್ರಧಾನಿಯವರಿಗೆ ನಾನು ಕೃತಜ್ಞನಾಗಿದ್ದೇನೆ ಎಂದಿದ್ದಾರೆ.

ರಷ್ಯಾದ ವಿರುದ್ಧದ ನಿರ್ಬಂಧಗಳನ್ನು ಸಹ ನಾವು ವಿವರವಾಗಿ ಚರ್ಚಿಸಿದ್ದೇವೆ. ರಷ್ಯಾದಿಂದ ಇಂಧನ ಆಮದು ಮಾಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸೆಪ್ಟೆಂಬರ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಮಯದಲ್ಲಿ ಇಬ್ಬರು ಪರಸ್ಪರ ಭೇಟಿಯಾಗಲು ನಾವು ಒಪ್ಪಿಕೊಂಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

Share This Article