ಪಬ್ಲಿಕ್ ಪ್ಲೇಸ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ – ಆರೋಪಿಗಳ ಬಂಧನ

Public TV
1 Min Read

ಭೋಪಾಲ್: ಮಧ್ಯಪ್ರದೇಶದ ಅಲಿರಾಜ್‍ಪುರ ಜಿಲ್ಲೆಯಲ್ಲಿ ಹಾಡಹಗಲೇ ಸಾರ್ವಜನಿಕವಾಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು,  ಈ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮಹಿಳೆಯರಿಗೆ ಕಿರುಕುಳ ನೀಡುವುದಕ್ಕೆ ಪ್ರಚೋದನೆ ನೀಡಿದ ಇನ್ನೂ ಮೂರ್ನಾಲ್ಕು ವ್ಯಕ್ತಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ. ಸದ್ಯ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ ಇಬ್ಬರನ್ನು ಹಾಗೂ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಮೂವರು ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಅಲಿರಾಜ್‍ಪುರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲಿಯಂ ಹರ್ಟ್ ಇನ್ನಿಲ್ಲ

ವೀಡಿಯೋದಲ್ಲಿ ಕೆಲವು ಪುಂಡರು ಸಾರ್ವಜನಿಕ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರನ್ನು ತಳ್ಳುವುದು, ತಬ್ಬಿಕೊಳ್ಳುವುದು, ಕೂಗಾಡುತ್ತಾ ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿರುವುದನ್ನು ಕಾಣಬಹುದಾಗಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ಕೇಸರಿ ಟವೆಲ್ ಧರಿಸಿದ್ದು, ಆರೋಪಿಗಳು ರಾಜಕೀಯ ಬೆಂಬಲ ಹೊಂದಿರುವವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೋಪಾಲ್‍ನಿಂದ ಸುಮಾರು 392 ಕಿಮೀ ದೂರದಲ್ಲಿರುವ ಬುಡಕಟ್ಟು ಜನಾಂಗದ ಪ್ರಾಬಲ್ಯದ ಅಲಿರಾಜ್‍ಪುರ ಜಿಲ್ಲೆಯ ವಾಲ್‍ಪುರ್ ಪ್ರದೇಶದಲ್ಲಿ ಎರಡು ದಿನಗಳ ಹಿಂದೆ ಈ ಘಟನೆ ಸಂಭವಿಸಿದ್ದು, ಈ ಘಟನೆ ಬಗ್ಗೆ ಯಾವುದೇ ಮಹಿಳೆಯರು ದೂರು ನೀಡಿಲ್ಲ. ಆದರೆ ವೈರಲ್ ಆಗಿರುವ ವೀಡಿಯೋ ಆಧಾರದ ಮೇಲೆ ನಾವೇ ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕ್ಷಿಪಣಿ ಬಗ್ಗೆ ಭಾರತಕ್ಕೆ ಪ್ರತ್ಯುತ್ತರ ನೀಡೋ ಬದಲು ಪಾಕಿಸ್ತಾನ ಸಂಯಮ ಬಯಸುತ್ತೆ: ಇಮ್ರಾನ್ ಖಾನ್

ಇದೀಗ ಆರೋಪಿಗಳ ವಿರುದ್ಧ ರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಮತ್ತು 345-ಎ (ಲೈಂಗಿಕ ಕಿರುಕುಳ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *