ಚುನಾವಣಾಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬ್ಯಾಲೆಟ್ ಪೇಪರ್ ದೋಚಿದ ಕಿಡಿಗೇಡಿಗಳು

Public TV
1 Min Read

ರಾಮನಗರ: ಚುನಾವಣಾ (Election) ಕಾರ್ಯಕ್ಕೆ ತೆರಳುತ್ತಿದ್ದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಬ್ಯಾಲೆಟ್ ಪೇಪರ್ ದೋಚಿದ ಪ್ರಕರಣ ಮಾಗಡಿಯ (Magadi ) ಕುಣಿಗಲ್ ರಸ್ತೆಯಲ್ಲಿ ನಡೆದಿದೆ.

ಅಧಿಕಾರಿಗಳು ಮಾಗಡಿ ತಾಲೂಕಿನ ಹುಲ್ಲೇನಹಳ್ಳಿ ಹಾಲು ಉತ್ಪಾದಕರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಸಿ ತೆರಳುತ್ತಿದ್ದರು. ಈ ವೇಳೆ ಕಿಡಿಗೇಡಿಗಳು ಅಧಿಕಾರಿಗಳ ವಾಹನವನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ಬಳಿಕ ಚುನಾವಣಾ ಪರಿಕರಗಳನ್ನು ದೋಚಿ ಪಾರಾರಿಯಾಗಿದ್ದಾರೆ. ಈ ವೇಳೆ ಮಹಿಳಾ ಅಧಿಕಾರಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾರೆ. ಈ ದೃಶ್ಯಗಳು ಮೊಬೈಲ್‍ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಕರ್ನಾಟಕದವರು ಸತ್ತಿಲ್ಲ, ಬದುಕಿದ್ದೇವೆ- ಕಾವೇರಿ ಪರ ಧ್ವನಿಯೆತ್ತಿದ ಸಾ ರಾ ಗೋವಿಂದು

ಅಧಿಕಾರಿಗಳು ಬೊಲೆರೋ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಸ್ಯಾಂಟ್ರೋ ಕಾರಿನಲ್ಲಿ ಬಂದ 5 ಜನ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸ್ಟಾಲಿನ್ ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡ್ತಿದ್ದಾರೆ: ಗೋವಿಂದ ಕಾರಜೋಳ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್