ಮನೆ, ಬಾಡಿಗೆ ಮನೆ ಬದಲಿಸುವವರಿಗೆ ಗೃಹಜ್ಯೋತಿ; ಡಿ-ಲಿಂಕ್ ಮಾಡುವುದು ಹೇಗೆ?

Public TV
2 Min Read

– ಗೃಹಜ್ಯೋತಿ ಲಾಭ ಪಡೆಯಲು ಅವಕಾಶ

ಬೆಂಗಳೂರು: ಯಾವುದೇ ಕಾರಣಕ್ಕೆ ಮನೆ ಬದಲಿಸುವವರಿಗೆ ಗೃಹಜ್ಯೋತಿ ಅವಕಾಶವನ್ನ ಇಂಧನ ಇಲಾಖೆ ಕಲ್ಪಿಸಿದೆ. ಬಾಡಿಗೆಗೆ ಇದ್ದ ಹಳೆ ಮನೆಯ ಆರ್‌ಆರ್ ಸಂಖ್ಯೆ ಡಿ-ಲಿಂಕ್ ಮಾಡಿ ಹೊಸ ಮನೆಗೆ ಬಾಡಿಗೆಗೆ ಹೋಗುವ ಮನೆಯ ಸಂಖ್ಯೆಯೊಂದಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಒಂದು ವರ್ಷದ ಹಿನ್ನೆಲೆ ಇಂಧನ ಇಲಾಖೆಯಿಂದ ಪ್ರಕಟಣೆ ಹೊರಡಿಸಿದೆ.

ಗೃಹಜ್ಯೋತಿಗೆ ವರ್ಷದ ಸಂಭ್ರಮ
2024ರ ಜೂನ್‌ ವರೆಗೆ ಗೃಹಜ್ಯೋತಿಗೆ ಒಟ್ಟು 1.67 ಕೋಟಿ ನೋಂದಣಿಯಾಗಿದೆ. ಒಟ್ಟು ಗೃಹಜ್ಯೋತಿ ಫಲಾನುಭವಿಗಳ ಸಂಖ್ಯೆ 1.56 ಕೋಟಿ ಇದೆ. 2023 ಆಗಸ್ಟ್ ರಿಂದ 2024 ಜೂನ್‌ ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟ ಸಬ್ಸಿಡಿ ಮೊತ್ತ 8,239 ಕೋಟಿ ರೂ.

ಮನೆ ಬದಲಾಯಿಸಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್‌ ಮಾಡುವುದು ಹೇಗೆ?
ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್‌ ನಂಬರ್‌ ಜೊತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌.ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬಹುದು.

ಗೃಹಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು. ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಇಂಧನ ಇಲಾಖೆ ತಿಳಿಸಿದೆ.

Share This Article