ಗೃಹಲಕ್ಷ್ಮಿ ಯೋಜನೆ ಜಾರಿಗೆ ಕೌಂಟ್‍ಡೌನ್ – ನೋಂದಣಿ ಪ್ರಕ್ರಿಯೆ ಹೇಗೆ? ಯಾರು ಅರ್ಹರು?

Public TV
2 Min Read

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Congress Guarantee) ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ನೋಂದಣಿಗೆ ಇಂದು ಸಂಜೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಗೃಹಲಕ್ಷ್ಮಿ ಅಪ್ಲಿಕೇಶನ್‌  ಬಿಡುಗಡೆ ಮಾಡಲಿದ್ದು, ಸಂಜೆಯಿಂದ ಅರ್ಜಿ ಸ್ವೀಕಾರ ಆರಂಭ ಆಗಲಿದೆ.

ಈ ನೋಂದಣಿಯನ್ನು ಮಹಿಳೆಯರೇ ಮಾಡಲು ಸಾಧ್ಯವಿಲ್ಲ. ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂದು ಸರ್ಕಾರವೇ ತಿಳಿಸುತ್ತದೆ. ಜೊತೆಗೆ ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಡೆಡ್‍ಲೈನ್ ಕೂಡ ನಿಗದಿಯಾಗಿಲ್ಲ. ಈ ಯೋಜನೆಯಡಿ ಆಗಸ್ಟ್ 16ರ ನಂತರ ಬಿಪಿಎಲ್ ಕುಟುಂಬದ ಒಡತಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ಹಣ ಜಮೆ ಮಾಡಲಾಗುತ್ತದೆ.  ಇದನ್ನೂ ಓದಿ: 26 ಪಕ್ಷಗಳ ಮಹಾಮೈತ್ರಿಕೂಟಕ್ಕೆ ‘INDIA’ ಹೆಸರು ನಾಮಕರಣ

ನೋಂದಣಿ ಪ್ರಕ್ರಿಯೆ ಹೇಗೆ?
ಗೃಹಲಕ್ಷ್ಮಿ ನೋಂದಣಿಗೆ ಯಾರು ಪರದಾಡಬೇಕಿಲ್ಲ. ಯಜಮಾನಿಗೆ ಎಸ್‍ಎಂಎಸ್ ಮೂಲಕ ದಿನಾಂಕ, ಸಮಯ, ನೋಂದಣಿ ಸ್ಥಳದ ಮಾಹಿತಿ ಕಳುಹಿಸಲಾಗುತ್ತದೆ. ಪಡಿತರ ಚೀಟಿ ಸಂಖ್ಯೆ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಮಾಹಿತಿ ನೀಡಬೇಕಾಗುತ್ತದೆ. ನಿಗದಿತ ದಿನ ನೋಂದಣಿ ಸಾಧ್ಯವಾಗದಿದ್ದಲ್ಲಿ ಯಾವುದೇ ದಿನ ಸಂಜೆ ನೋಂದಣಿ ಮಾಡಿಸಬಹುದು. ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಸಂಪೂರ್ಣ ಉಚಿತ.

 

 ಯಾರು ಅರ್ಹರು?
* ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಲು ಅರ್ಹ
* ಫಲಾನುಭವಿ ಮಹಿಳೆ, ಅವರ ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು
* ಫಲಾನುಭವಿ ಮಹಿಳೆ, ಅವರ ಪತಿ ಜಿಎಸ್‍ಟಿ ತೆರಿಗೆ ಪಾವತಿದಾರನಾಗಿರಬಾರದು
* ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂ. ಜಮೆ
* ಫಲಾನುಭವಿ ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು
* ಪರ್ಯಾಯ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಪ್ರತಿ ತಿಂಗಳು 2000 ರೂ.ಜಮೆ

 

ಎಲ್ಲೆಲ್ಲಿ ನೋಂದಣಿ ಮಾಡಿಕೊಳ್ಳಬಹುದು?
ಗ್ರಾಮ ಒನ್, ಬಾಪೂಜಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ, ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು, ಪ್ರಜಾಪ್ರತಿನಿಧಿಯಿಂದ ನೋಂದಣಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್