ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ, ತಪ್ಪು ಮಾಹಿತಿ ಕೊಟ್ಟವರ ವಿರುದ್ಧ ಕ್ರಮ: ಹೆಬ್ಬಾಳ್ಕರ್‌

Public TV
1 Min Read

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ. ತಪ್ಪು ಮಾಹಿತಿ ಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ವಿಧಾನ ಸೌಧದಲ್ಲಿ‌ ಮಾತನಾಡಿದ ಅವರು, ‌ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ (Social Media) ಗೃಹಲಕ್ಷ್ಮಿ ಯೋಜನೆ ಸ್ಥಗಿತ ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಪ್ರತಿಕ್ರಿಯಿಸಿದ ಅವರು ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟಿಸ್‌ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಚಿವರು ತಿಳಿಸಿದರು.

 

ಈ ಕುರಿತು ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರೊಂದಿಗೆ ಸಭೆ ನಡೆಸಿದ್ದು, ಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚಿಸಲಾಗಿದೆ. ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮಾವಣೆಯಾಗಿದೆ ಎಂದರು. ಇದನ್ನೂ ಓದಿ: SC, ST ಸಮುದಾಯದ ದೌರ್ಜನ್ಯ ಕೇಸ್ ಸರಿಯಾಗಿ ನಿರ್ವಹಣೆ ಮಾಡದೇ ಹೋದ್ರೆ ಅಧಿಕಾರಿಗಳೇ ಹೊಣೆ: ಸಿಎಂ

ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 63 ಲಕ್ಷ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ ಎಂದರು.

ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ.ಇನ್ನೂ ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗಲಿದೆ ಎಂದಿದ್ದಾರೆ.

 

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್