60 ವರ್ಷದ ಸುದೀರ್ಘ ರಾಜಕಾರಣಕ್ಕೆ ಸಂಸದ ಬಸವರಾಜು ವಿದಾಯ

Public TV
2 Min Read

ತುಮಕೂರು: ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ಜಿ.ಎಸ್.ಬಸವರಾಜು (GS Basavaraju) ಅವರು ತಮ್ಮ ಆರು ದಶಕಗಳ ಸುದೀರ್ಘ ರಾಜಕೀಯ (Politics) ಜೀವನಕ್ಕೆ ವಿದಾಯ ಹೇಳಿದ್ದಾರೆ.

ರಾಜಕಾರಣದಲ್ಲಿ ಸಾಕಷ್ಟು ದಾಖಲೆ ನಿರ್ಮಿಸಿ, ಹಲವು ಏಳುಬೀಳು ಕಂಡ ಈ ಹಿರಿಯ ರಾಜಕಾರಣಿ ಸಕ್ರಿಯ ರಾಜಕಾರಣದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. 86ನೇ ವಸಂತಕ್ಕೆ ಕಾಲಿಟ್ಟಿರುವ ಬಸವರಾಜು ತಮ್ಮ ಜನ್ಮದಿನದಂದೇ (ಮೇ 4) ಅಧಿಕೃತವಾಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ರೂಪಿಸಿಕೊಂಡು ಬಿಜೆಪಿಯಲ್ಲಿ ತಮ್ಮ ರಾಜಕೀಯ ಬದುಕಿಗೆ ವಿದಾಯ ಹೇಳಿದ್ದಾರೆ. ಇದನ್ನೂ ಓದಿ: ಹೆಚ್‌.ಡಿ.ರೇವಣ್ಣ 4 ದಿನ ಎಸ್‌ಐಟಿ ಕಸ್ಟಡಿಗೆ

ತಾಲೂಕು ಬೋರ್ಡ್ ಸದಸ್ಯರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಬಸವರಾಜು ಅವರು ಒಂದೊಂದೇ ಮೆಟ್ಟಿಲೇರುತ್ತಾ ಸಂಸತ್‌ವರೆಗೂ ಪ್ರವೇಶ ಮಾಡಿದರು. ಆರಂಭದ ದಿನಗಳಲ್ಲಿ ತಾಲೂಕು ಬೋರ್ಡ್ ಅಧ್ಯಕ್ಷರಾಗಿ, ಎಪಿಎಂಸಿ ಅಧ್ಯಕ್ಷರಾಗಿ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾಗಿ ರಾಜಕೀಯ ವೃತ್ತಿ ಜೀವನಕ್ಕೆ ತೆರೆದುಕೊಂಡರು. ಇದನ್ನೂ ಓದಿ: ಇದೊಂದು ರಾಜಕೀಯ ಷಡ್ಯಂತ್ರ: ಬಂಧನ ಬಳಿಕ ಹೆಚ್‌.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ

ಸತತ 21 ವರ್ಷ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ದಾಖಲೆ ನಿರ್ಮಿಸಿದ್ದಾರೆ. ಲೋಕಸಭೆಗೆ ಎಂಟು ಬಾರಿ ಸ್ಪರ್ಧಿಸಿ, ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಮೂರು ಬಾರಿ ಸೋಲು ಕಂಡಿದ್ದಾರೆ. ತುಮಕೂರು ಲೋಕಸಭೆಯಿಂದ ಯಾರೊಬ್ಬರು ಐದು ಬಾರಿ ಸಂಸತ್ ಸದಸ್ಯರಾಗಿಲ್ಲ. ಇದನ್ನೂ ಓದಿ: ವಕೀಲನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ – ಮೂವರು ಆರೋಪಿಗಳ ಬಂಧನ

ಕಾಂಗ್ರೆಸ್ ಪಕ್ಷದಿಂದ 1984ರಲ್ಲಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಾರೆ. 1989, 1999ರಲ್ಲಿ ಕಾಂಗ್ರೆಸ್‌ನಿಂದ ಹಾಗೂ 2009, 2019ರಲ್ಲಿ ಬಿಜೆಪಿಯಿಂದ ಲೋಕಸಭೆ ಸದಸ್ಯರಾಗುತ್ತಾರೆ. ಗುಬ್ಬಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಇವರು ಒಮ್ಮೆ ರೆಡ್ಡಿ ಕಾಂಗ್ರೆಸ್ ಹಾಗೂ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲುತ್ತಾರೆ. ವಿಧಾನಸಭೆ ಮೆಟ್ಟಿಲೇರುವ ಕನಸು ಕೊನೆಗೂ ಸಾಕಾರಗೊಂಡಿಲ್ಲ. ಇದನ್ನೂ ಓದಿ: ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದು ಜೆಡಿಯು ಅಭ್ಯರ್ಥಿ ಪರ ಮಾಜಿ ಶಾಸಕ ರೋಡ್‌ಶೋ

ರಾಜಕೀಯ ಜೀವನದ ಬಹುತೇಕ ಸಮಯವನ್ನು ಕಾಂಗ್ರೆಸ್‌ನಲ್ಲೇ ಕಳೆಯುತ್ತಾರೆ. ಬಿಎಸ್ ಯಡಿಯೂರಪ್ಪ ಸಖ್ಯದ ನಂತರ ಬಿಜೆಪಿ ಸೇರುತ್ತಾರೆ. ಅವರು ಕೆಜೆಪಿ ಕಟ್ಟಿದ ಸಮಯದಲ್ಲಿ ಹಿಂಬಾಲಿಸುತ್ತಾರೆ. ಆ ಸಮಯದಲ್ಲಿ ಬಿಜೆಪಿಯಿಂದ ಅಮಾನತು ಮಾಡಲಾಗುತ್ತದೆ. ಯಡಿಯೂರಪ್ಪ ಬಿಜೆಪಿಗೆ ಮರಳಿದ ನಂತರ ಬಸವರಾಜು ಸಹ ವಾಪಸಾಗುತ್ತಾರೆ. ಆದರೆ ಪಕ್ಷದಿಂದ ಮಾಡಿದ ಅಮಾನತು ಆದೇಶವನ್ನು ಹಿಂದಕ್ಕೆ ಪಡೆದಿರುವುದಿಲ್ಲ.  ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಲೇಬೇಕು: ಜೋಶಿ

Share This Article