ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ಬರೆ; ಸಿಎಂ ಮಧ್ಯಪ್ರವೇಶಿಸಿ ಪರಿಹಾರ ಒದಗಿಸಲಿ: ಬೊಮ್ಮಾಯಿ ಆಗ್ರಹ

Public TV
2 Min Read

ಬೆಂಗಳೂರು: ಕರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್‌ಟಿ ಶಾಕ್ ಕೊಟ್ಟಿರುವಂಥದ್ದು ಅತ್ಯಂತ ಖಂಡನೀಯ. ಜಿಎಸ್‌ಟಿ ಕಾನೂನು ಅಡಿಯಲ್ಲಿ ವ್ಯಾಪಾರ ವಹಿವಾಟು ಮಾಡಲು ಕೆಲವು ರಿಯಾಯಿತಿ ಇದೆ. ಸಿಎಂ ಸಿದ್ದರಾಮಯ್ಯ (Siddaramaiah) ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಕೂಡಲೇ ಸಣ್ಣ ವ್ಯಾಪಾರಸ್ಥರಿಗೆ ಪರಿಹಾರ ಒದಗಿಸಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್ ಮೂಲಕ ಪ್ರತಿಕ್ರಿಯಿಸಿದ ಅವರು, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳ ವಿಚಾರದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ (Commercial tax department), ದುಡುಕಿ ಹಲವಾರು ವರ್ಷದ ತೆರಿಗೆ ಅದರ ಮೇಲೆ ಬಡ್ಡಿ ಮತ್ತು ಇತರ ಚಾರ್ಜ್ ಹಾಕಿದೆ. ಈ ಮೂಲಕ ಸಣ್ಣ ಬೀದಿಬದಿ ವ್ಯಾಪಾರಸ್ಥರ ಮೇಲೆ ದೊಡ್ಡ ಹೊರೆ ಹೊರೆಸಿ ಅವರು ವ್ಯಾಪಾರ ಮುಚ್ಚುವ ಪರಿಸ್ಥಿತಿಗೆ ತಂದಿರುವುದು ಯಾರೂ ಕೂಡ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊಲೆ ಕೇಸಲ್ಲಿ ಮೂರೂವರೆ ಗಂಟೆ ಪೊಲೀಸರಿಂದ ಗ್ರಿಲ್ – ಹೊರ ಬರ್ತಿದ್ದಂತೆ ಬೆಂಬಲಿಗರಿಂದ ಜೈಕಾರ

ಸಂಬಂಧಪಟ್ಟ ಸಣ್ಣ ವ್ಯಾಪಾರಿಗಳ ಪ್ರತಿನಿಧಿಗಳನ್ನು ಕರೆದು ಚರ್ಚೆ ಮಾಡಿ, ಅವರಿಗೆ ಎಲ್ಲ ರೀತಿಯ ರಿಯಾಯಿತಿಗಳನ್ನು ಕೊಟ್ಟು ಕರ ಸಮಾಧಾನ ಯೋಜನೆ ಅಡಿಯಲ್ಲಿ ಯಾವ ರೀತಿ ತೆರಿಗೆದಾರರಿಗೆ ಸಹಾಯ ಮಾಡುತ್ತೇವೊ, ಅದೇ ರೀತಿ ಅವರಿಗೂ ಸಹಾಯ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

ಬೇರೆ ರಾಜ್ಯಗಳಲ್ಲಿ ಈ ವಿಚಾರದಲ್ಲಿ ಏನೆಲ್ಲ ಕ್ರಮ ತೆಗೆದುಕೊಂಡಿದ್ದಾರೆ. ಸಣ್ಣ ವ್ಯಾಪಾರಸ್ಥರು ಮತ್ತು ಗ್ರಾಹಕರ ಹಿತ ದೃಷ್ಟಿಯಿಂದ ಆ ಕ್ರಮ ಇಲ್ಲಿ ಕೂಡ ಅನ್ವಯಿಸಬೇಕೆಂದು ಆಗ್ರಹ ಮಾಡುತ್ತೇನೆ. ರಾಜ್ಯದಲ್ಲಿ ಹಣಕಾಸಿನ ತೊಂದರೆಯಾಗಿ ಬೊಕ್ಕಸ ಖಾಲಿಯಾಗಿರುವುದು ಮತ್ತು ಈ ವರ್ಷದ ಮೊದಲನೇಯ ತ್ರೈಮಾಸಿಕ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಗಾಬರಿಯಿಂದ ತೀವ್ರವಾದ ಕ್ರಮಕ್ಕೆ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಉನ್ನತ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Share This Article