ಹಾಸನ: ಗ್ಯಾರಂಟಿಗೆ (Guarantee Scheme) ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಹಾಸನದಲ್ಲಿ (Hassan) ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ಒಂದು ವರ್ಷದೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ: ಸಿದ್ದರಾಮಯ್ಯ ಕಿಡಿ
ಶಕ್ತಿ ಯೋಜನೆ ವೇಸ್ಟ್ ಅಂತಾರೆ. ನಾವು ದಡ್ಡರಲ್ಲ ಒಂದು ಲಕ್ಷಕ್ಕೂ ಹೆಚ್ಚು ಕೋಟಿ ರೂ. ಹಣ ಖರ್ಚು ಮಾಡುವುದು ಸಮಾನತೆ ತರಲು. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳಿದ್ದರು. ಇದಕ್ಕೆಲ್ಲಾ ಜನರು ನೀವೇ ಉತ್ತರ ಕೊಡಬೇಕು ಎಂದಿದ್ದಾರೆ.
ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಾನು ಮಾತು ಕೊಡಲ್ಲ ಕೊಟ್ಟ ಮೇಲೆ ಮಾಡೇ ಮಾಡ್ತಿವಿ. ಡಿಕೆಶಿ (D.K Shivakumar) ಯಾವಾಗಲೂ ಹೇಳುತ್ತಿರುತ್ತಾರೆ, ಟೀಕೆಗಳು ಸಾಯುತ್ತವೆ, ಮಾಡಿರುವ ಕೆಲಸಗಳು ಉಳಿಯುತ್ತವೆ ಎಂದಿದ್ದಾರೆ. ಇದನ್ನೂ ಓದಿ: ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ: ಡಿ.ಕೆ.ಶಿವಕುಮಾರ್

