ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ಕಾರ್ಡ್‌ ಹೊಂದಿದ ಯಜಮಾನಿಗೆ ಮಾತ್ರ 2 ಸಾವಿರ ರೂ.

Public TV
1 Min Read

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಮಾರ್ಗಸೂಚಿ ಪ್ರಕಟವಾಗಿದ್ದು ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ (BPL, APL, Antyodaya) ಹೊಂದಿದ ಮಹಿಳೆಯರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ.

ಕಾರ್ಡ್​ನಲ್ಲಿ ನಮೂದಾಗಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ.

 

ಜೂನ್ 15 ರಿಂದ ಜುಲೈ 15ರ ವರೆಗೆ ಸೇವಾಸಿಂಧು (Seva Sindhu) ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಭೌತಿಕವಾಗಿಯೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆ ಕಡ್ಡಾಯ ಮಾಡಲಾಗಿದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್‌ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇದನ್ನೂ ಓದಿ: ಬಾಡಿಗೆದಾರರೇ ನಿಮಗೆ ಉಚಿತ ವಿದ್ಯುತ್‌ ಬೇಕೇ – ಷರತ್ತುಗಳನ್ನು ಪೂರ್ಣಗೊಳಿಸಿದ್ರೆ ಮಾತ್ರ ಫ್ರೀ

 

ಯಜಮಾನಿ ಅಥವಾ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಯಜಮಾನಿ ಅಥವಾ ಪತಿ ಜಿಎಸ್​​ಟಿ ರಿಟರ್ನ್ ಸಲ್ಲಿಸುವವರರಾಗಿದ್ದಲ್ಲಿ ಈ ಯೋಜನೆಯ ಲಾಭ ಸಿಗುವುದಿಲ್ಲ.

ಒಂದು ವೇಳೆ ತಪ್ಪು ಮಾಹಿತಿ ನೀಡಿದ್ದಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾರ್ಗಸೂಚಿ ಎಚ್ಚರಿಕೆಯನ್ನು ನೀಡಲಾಗಿದೆ.

Share This Article