ಆರ್ಥಿಕ ಸಂಕಷ್ಟ – ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

Public TV
1 Min Read

ಗಾಂಧಿನಗರ: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೂರತ್‍ನಲ್ಲಿ (Surat) ನಡೆದಿದೆ. ಆರು ಮಂದಿ ವಿಷಕಾರಿ ಪದಾರ್ಥ ಸೇವಿಸಿ ಸಾವನ್ನಪ್ಪಿದ್ದು, ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ನೇಣು ಬಿಗಿದುಕೊಂಡು ಮೃತಪಟ್ಟ ವ್ಯಕ್ತಿಯನ್ನು ಮನೀಶ್ ಸೋಲಂಕಿ ಎಂದು ಗುರುತಿಸಲಾಗಿದೆ. ಆತನ ಪತ್ನಿ ರೀಟಾ, ತಂದೆ ಕಾನು, ತಾಯಿ ಶೋಭಾ ಮತ್ತು ಮೂವರು ಮಕ್ಕಳನ್ನು ದಿಶಾ, ಕಾವ್ಯ ಮತ್ತು ಕುಶಾಲ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕಳ್ಳತನಕ್ಕೆ ಯತ್ನ – ಮಹಿಳೆಗೆ ಗುಂಡು ಹಾರಿಸಿ ಹತ್ಯೆ

ಮನೆಯಲ್ಲಿ ಡೆತ್‍ನೋಟ್ ಸಹ ಪತ್ತೆಯಾಗಿದೆ. ಅದನ್ನು ಪೊಲೀಸರು (Police) ವಶಪಡಿಸಿಕೊಂಡಿದ್ದು, ಸೋಲಂಕಿ ಆರ್ಥಿಕ ಸಮಸ್ಯೆಯಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಣೆಯನ್ನು ಹಂಚಿಕೊಳ್ಳಲು ಪೊಲೀಸರು ನಿರಾಕರಿಸಿದ್ದಾರೆ.

ಸೋಲಂಕಿ ಪೀಠೋಪಕರಣ ವ್ಯಾಪಾರ ನಡೆಸುತ್ತಿದ್ದ. ಅವರೊಂದಿಗೆ ಸುಮಾರು 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಅವರ ಉದ್ಯೋಗಿಗಳು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಕರೆ ಸ್ವೀಕರಿಸದೇ ಇರುವುದು ಮತ್ತು ಮನೆಯ ಬಾಗಿಲು ತೆರೆಯದಿದ್ದಾಗ ಅನುಮಾನ ಬಂದು ಸ್ಥಳೀಯರು ಕಿಟಕಿಯನ್ನು ಒಡೆದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಮೃತದೇಹಗಳು ಪತ್ತೆಯಾಗಿವೆ. ಇದನ್ನೂ ಓದಿ: ಕಳ್ಳತನಕ್ಕೆ ಯತ್ನ – ಮಹಿಳೆಗೆ ಗುಂಡು ಹಾರಿಸಿ ಹತ್ಯೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್