SSLCಯಲ್ಲಿ 99% ಅಂಕ ತೆಗೆದ ವಿದ್ಯಾರ್ಥಿನಿಯ ಮೆದುಳಿನಲ್ಲಿ ರಕ್ತಸ್ರಾವವಾಗಿ ದುರ್ಮರಣ

Public TV
1 Min Read

ಗಾಂಧಿನಗರ: ಬೋರ್ಡ್ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯಾದ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ (Brain Hemorrhage) ಸಾವನ್ನಪ್ಪಿದ್ದಾಳೆ.

ಗುಜರಾತ್ (Gujrat) ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಎಜುಕೇಶನ್ ಬೋರ್ಡ್ (GSEB) ಫಲಿತಾಂಶ ಮೇ 11 ರಂದು ಪ್ರಕಟವಾಗಿದೆ. ಹೀರ್ ಘೆಟಿಯಾ ಎಂಬಾಕೆ 10 ನೇ ತರಗತಿ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ್ದಾಳೆ.

ಆಕೆಗೆ ಮೆದುಳಿನ ರಕ್ತಸ್ರಾವವಾಗಿದ್ದು, ಒಂದು ತಿಂಗಳ ಹಿಂದೆ ರಾಜ್‌ಕೋಟ್‌ನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ಶಸ್ತ್ರಚಿಕಿತ್ಸೆಯ ನಂತರ ಡಿಸ್ಚಾರ್ಜ್ ಕೂಡ ಆಗಿ ಮನೆಗೆ ತೆರಳಿದ್ದಳು. ಆದರೆ ವಾರದ ಹಿಂದೆ ಆಕೆಯಲ್ಲಿ ಮತ್ತೆ ಉಸಿರಾಟ ಮತ್ತು ಹೃದಯದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು.

ಎಂಆರ್‌ಐ ವರದಿಯಲ್ಲಿ 80% ರಿಂದ 90% ರಷ್ಟು ಆಕೆಯ ಮೆದುಳು ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ತೋರಿಸಿದೆ. ಆಕೆಯ ಹೃದಯ ಕೆಲಸ ಮಾಡುವುದನ್ನು ನಿಲ್ಲಿಸಿದ ನಂತರ ಹೀರ್ ಬುಧವಾರ ನಿಧನರಾದಳು. ಬಳಿಕ ಆಕೆಯ ಕಣ್ಣುಗಳು ಮತ್ತು ಆಕೆಯ ದೇಹವನ್ನು ಪೋಷಕರು ದಾನ ಮಾಡಿದರು. ಇದನ್ನೂ ಓದಿ: ನನ್ನ ಮಗಳದ್ದು ಆತ್ಮಹತ್ಯೆ ಅಲ್ಲ, ಕೊಲೆ- ಮೃತ ಪ್ರಭುಧ್ಯಾ ತಾಯಿ ಗಂಭೀರ ಆರೋಪ

ತಂದೆ ಮಾಧ್ಯಮಗಳ ಜೊತೆ ಮಾತನಾಡಿ, ಹೀರ್ ವೈದ್ಯೆ ಆಗಬೇಕೆಂದು ಬಯಸಿದ್ದಳು. ಆದರೆ ವಿಧಿ ಲಿಖಿತ ಬೇರೆಯೇ ಆಗಿತ್ತು. ಸದ್ಯ ಆಕೆಯ ದೇಹವನ್ನು ದಾನ ಮಾಡಿದ್ದೇವೆ. ಈ ಮೂಲಕ ಅವಳು ವೈದ್ಯನಾಗಲು ಸಾಧ್ಯವಾಗದಿದ್ದರೂ, ಅವಳು ಇತರ ಜೀವಗಳನ್ನು ಉಳಿಸಲು ಸಹಾಯ ಮಾಡಲು ಸಾಧ್ಯವಾಗುತ್ತದೆ ಎಂದು ಗದ್ಗದಿತರಾದರು.

Share This Article